ಧಾರವಾಡ: ಹುಬ್ಬಳ್ಳಿ ತಾಲೂಕಿನ ಕುಸುಗಲ್ಲ ಗ್ರಾಮದಿಂದ ಅಳಗವಾಡಿಗೆ ಹೋಗುವ ರಸ್ತೆ ಹಾಗೂ ಸುಳ್ಳದಿಂದ ಹೆಬ್ಬಸೂರ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಹೋಗುವ ರಸ್ತೆಯನ್ನು ಈ ಕೂಡಲೇ ಸುಧಾರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಸ್ತೆ ದುರಸ್ತಿಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ - dharawad latest news
ಕುಸುಗಲ್ ಗ್ರಾಮಸ್ಥರು ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ
ಕುಸುಗಲ್ ಗ್ರಾಮಸ್ಥರು ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ರಸ್ತೆ ಸುಧಾರಣೆ ಮಾಡದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕುಸುಗಲ್ ಗ್ರಾಮದಿಂದ ಅಳಗವಾಡಿ ಮುಖ್ಯ ರಸ್ತೆಯು ಹಾಗೂ ಸುಳ್ಳದಿಂದ ಹುಬ್ಬಳ್ಳಿ ರಸ್ತೆಗಳು ತೀರಾ ಹಾಳಾಗಿವೆ. ವಾಹನ ಸಂಚಾರಕ್ಕೆ ಹಾಗೂ ರೈತರು ತಮ್ಮ ಜಮೀನುಗಳಿಗೆ ಹೋಗುವ ರಸ್ತೆ ಹಾಗೂ ಈ ಮಾರ್ಗದಲ್ಲಿ ಅಪಘಾತಗಳು ಹೆಚ್ಚಾಗಿವೆ. ಕೂಡಲೇ ರಸ್ತೆ ಸುಧಾರಿಸಬೇಕು ಎಂದು ಒತ್ತಾಯಿಸಿದರು.