ಹುಬ್ಬಳ್ಳಿ:ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ಕೋರಿ ದುರ್ಗದ ಬೈಲಿಂದ ದಾಜಿಬಾನ್ ಪೇಟೆ ಮೂಲಕ ಮಹಾನಗರ ಪಾಲಿಕೆ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ಹಾಗೂ ಸಹಿ ಸಂಗ್ರಹ ಮಾಡಲಾಯಿತು.
ರಾಣಿ ಚೆನ್ನಮ್ಮ ಮೈದಾನ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಬಜರಂಗದಳ, ಹಿಂದೂ ಜಾಗರಣ ವೇದಿಕೆ, ಶ್ರೀರಾಮಸೇನೆ ಸೇರಿದಂತೆ ವಿವಿಧ ಗಣೇಶೋತ್ಸವ ಮಂಡಳಿಗಳ ಪ್ರತಿಭಟನೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಾಥ್ ನೀಡಿದರು.
ಇದೇ ವೇಳೆ ಮಾತನಾಡಿದ ಶ್ರೀರಾಮಸೇನೆ ಪ್ರಮೋದ್ ಮುತಾಲಿಕ್, ಗಣೇಶೋತ್ಸವ ಆಚರಣೆಗೆ ಸರ್ಕಾರ ಹಾಗೂ ಪಾಲಿಕೆ ಮೀನಾಮೇಷ ಎಣಿಸುತ್ತಿವೆ. ಈದ್ಗಾ ಮೈದಾನ ಸಾರ್ವಜನಿಕರ ಸ್ವತ್ತು. ಅಲ್ಲಿ ಮುಸ್ಲಿಂರ ಪ್ರಾರ್ಥನೆಗೆ ಅವಕಾಶ ನೀಡ್ತಾರೆ. ಆದ್ರೆ ಗಣೇಶೋತ್ಸವ ಆಚರಣೆಗೆ ಯಾಕೆ ಅವಕಾಶ ನೀಡ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಮಾತನಾಡಿದರು ಗಣೇಶನನ್ನು ಕೂರಿಸುತ್ತೇವೆ: ಅನುಮತಿ ಕೊಟ್ಟರೂ ಸರಿ, ಕೊಡದಿದ್ದರೂ ಸರಿ. ಗಣೇಶೋತ್ಸವ ಆಚರಣೆ ಮಾಡೇ ಮಾಡ್ತೀವಿ. ಪಾಲಿಕೆಗೆ ಇದು ಕೊನೆಯ ಗಡುವು. ಈ ಗಡುವು ಮೀರಿದ್ರೆ ನಾವು ಗಣೇಶ ಆಚರಣೆ ಮಾಡೇ ಮಾಡ್ತೀವಿ. ಸಾವಿರಾರು ಕಾರ್ಯಕರ್ತರ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನು ಕೂರಿಸುತ್ತೇವೆ. ತಾಕತ್ ಇದ್ರೆ ಅದೇನ್ ಮಾಡ್ಕೋತಿರೋ ಮಾಡಿ. ನಾವು ನೋಡ್ತೀವಿ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆ ಮಾಡುತ್ತೇವೆ:ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕು. ಅವಕಾಶ ಕೊಡದೆ ಇದ್ದರೆ ಇದೇ 26 ರಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನೆ ಮುಂದೆ ಪ್ರತಿಭಟನೆ ಮಾಡುತ್ತೇವೆ. ಜಗದೀಶ್ ಶೆಟ್ಟರ್ ತುಟಿ ಬಿಚ್ಚಬೇಕು ಎಂದು ಒತ್ತಾಯಿಸಿದರು.
ಓದಿ:ಜನರ ಬದುಕಿಗೆ ಕಲ್ಲು ಹಾಕುವ ಕೆಲಸ ಮಾಡಬೇಡಿ: ಬಿಜೆಪಿ ಸರ್ಕಾರಕ್ಕೆ ಡಿಕೆಶಿ ಮನವಿ