ಧಾರವಾಡ: ಶಿಕ್ಷಕರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸತ್ಯಾಗ್ರಹಕ್ಕೆ ಮುಂಡರಗಿ ಮಠದ ನಿಜಗುಣಾನಂದ ಸ್ವಾಮೀಜಿ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು, ಶಿಕ್ಷಕರ ವಿವಿಧ ಬೇಡಿಕೆಗೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಇಂದು ಸಹ ಅನೇಕ ಶಿಕ್ಷಕರು ಕೈಜೋಡಿಸಿ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.