ಧಾರವಾಡ : ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸಿಟಿಜನ್ ಫಾರ್ ಡೆಮಾಕ್ರಸಿ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಸರ್ಕಾರದ ನೀತಿಗಳ ವಿರುದ್ಧ ಧಾರವಾಡದಲ್ಲಿ ಪ್ರತಿಭಟನೆ - Protest against the government
ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಸರ್ಕಾರದ ನೀತಿಗಳ ವಿರುದ್ಧ ಧಾರವಾಡದಲ್ಲಿ ಪ್ರತಿಭಟನೆ
ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜಾರಿ ಹಾಗೂ ಕಾರ್ಮಿಕ ಕಾನೂನುಗಳನ್ನು ಮೊಟಕುಗೊಳಿಸುವುದರಿಂದ ಹಲವು ದಶಕಗಳ ಹೋರಾಟದ ಫಲವಾಗಿ ಸಂಘಟಿತ ಕಾರ್ಮಿಕರು ಪಡೆದ ಸವಲತ್ತುಗಳನ್ನು ಶೇ. 70 ಕಾರ್ಮಿಕರು ಕಳೆದುಕೊಳ್ಳಲಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.