ಕರ್ನಾಟಕ

karnataka

ETV Bharat / state

ಹಥ್ರಾಸ್​ ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಗಳಿಂದ ಉಪವಾಸ ಸತ್ಯಾಗ್ರಹ - Protest in Dharwad against Adityanath government

ಹಥ್ರಾಸ್​ನಲ್ಲಿ ದಲಿತ ಯುವತಿಯನ್ನು ಕಾಮುಕರು ಅತ್ಯಾಚಾರ ಮಾಡಿ, ನಾಲಿಗೆ ತುಂಡರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆದರೆ, ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರ ಮಾತ್ರ ಮೌನ ವಹಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Protest in Dharwad for condemning rape of Hathras
ಹಥ್ರಾಸ್​ ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಗಳಿಂದ ಉಪವಾಸ ಸತ್ಯಾಗ್ರಹ

By

Published : Oct 12, 2020, 2:41 PM IST

ಧಾರವಾಡ:ಉತ್ತರಪ್ರದೇಶದ ಹಥ್ರಾಸ್​​ ಅತ್ಯಾಚಾರ ಸಂತ್ರಸ್ತೆಯ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಹಾಗೂ ಸಿ.ಎಂ. ಯೋಗಿ ಆದಿತ್ಯನಾಥ್ ಸರ್ಕಾರದ ದುರಾಡಳಿತ ಖಂಡಿಸಿ, ಸಿಟಿಜನ್ಸ್ ಫಾರ್ ಡೆಮಾಕ್ರಸಿ - ಕರ್ನಾಟಕ ಮತ್ತು‌ ಜನತಂತ್ರ ಪ್ರಯೋಗಶಾಲೆ ಸಂಘಟನೆಗಳು ನಗರದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಹಥ್ರಾಸ್​ ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಗಳಿಂದ ಉಪವಾಸ ಸತ್ಯಾಗ್ರಹ
ನಗರದ ಕಲಾಭವನದ ಹತ್ತಿರವಿರುವ ಅಂಬೇಡ್ಕರ್ ಪ್ರತಿಮೆ ಪಕ್ಕದಲ್ಲಿ ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಅವರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು. ಹಥ್ರಾಸ್​ನಲ್ಲಿ ದಲಿತ ಯುವತಿಯನ್ನು ಕಾಮುಕರು ಅತ್ಯಾಚಾರ ಮಾಡಿ, ನಾಲಿಗೆ ತುಂಡರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆದ್ರೆ, ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರ ಮಾತ್ರ ಮೌನ ವಹಿಸಿದೆ ಎಂದು ಆರೋಪಿಸಿದರು. ಸಂವಿಧಾನ, ಪ್ರಜಾತಂತ್ರದ ಮೌಲ್ಯಗಳನ್ನು ದಿಕ್ಕರಿಸಿ ಅತ್ಯಾಚಾರಿಗಳ ಪರವಾಗಿ ಸರ್ಕಾರ, ಪೊಲೀಸ್ ವ್ಯವಸ್ಥೆ ನಿಂತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಮೌನ ವಹಿಸಿದ್ದಾರೆ ಎಂದು ದೂರಿದರು.

For All Latest Updates

TAGGED:

ABOUT THE AUTHOR

...view details