ಹುಬ್ಬಳ್ಳಿ:ಲಿಡ್ಕರ್ ಚರ್ಮ ಕುಟೀರಗಳನ್ನು ತೆರವುಗೊಳಿಸದಂತೆ ಆಗ್ರಹಿಸಿ ಹರಳಯ್ಯ ಸಮಗಾರ ಸಮಾಜ ಅಭಿವೃದ್ಧಿ ಮಹಾಮಂಡಳ ಮತ್ತು ಸಮಗಾರ ಹರಳಯ್ಯ ಯುವ ಮಂಚ್ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಲಿಡ್ಕರ್ ಚರ್ಮ ಕುಟೀರಗಳ ತೆರವುಗೊಳಿಸದಂತೆ ಆಗ್ರಹಿಸಿ ಪ್ರತಿಭಟನೆ - ಲಿಡ್ಕರ್ ಚರ್ಮ ಕುಟೀರ
ಲಿಡ್ಕರ್ ಚರ್ಮ ಕುಟೀರಗಳನ್ನು ತೆರವುಗೊಳಿಸದಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರ ಕಚೇರಿ ಎದುರಿಗೆ ಸೇರಿದ ಕಾರ್ಯಕರ್ತರು ಜಿಲ್ಲಾಡಳಿತದ ಆದೇಶದಂತೆ, ಹು-ಧಾ ಮಹಾನಗರ ಪಾಲಿಕೆ ಲಿಡ್ಕರ್ ಚರ್ಮ ಕುಟೀರಗಳನ್ನು ತೆರವು ಮಾಡಲು ಮುಂದಾಗಿರುವುದು ಸರಿಯಲ್ಲ. ಇದರಿಂದಾಗಿ ದಲಿತ ಕುಟುಂಗಳು ಬೀದಿಗೆ ಬರಬೇಕಾಗುತ್ತದೆ. ಆದ್ದರಿಂದ ಕೂಡಲೇ ನಿರ್ಧಾರ ಕೈಬಿಡುವಂತೆ ಆಗ್ರಹಿಸಿದರು.
ಪುಟ್ಪಾತ್ ಮೇಲಿರುವ ಕುಟೀರಗಳನ್ನು ತೆರವು ಮಾಡುತ್ತಿರುವುದು ಅಂಗಡಿ ಅವಲಂಬಿಸಿ ಜೀವನ ನಡೆಸುತ್ತಿರುವ ದಲಿತ ಕುಟುಂಬಗಳ ಮೇಲೆ ಬರೆ ಎಳೆದಂತಾಗುತ್ತದೆ. ಈ ಕಾರ್ಯಾಚರಣೆ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.