ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ : ಗ್ಯಾಸ್ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ಶಿವಸೇನೆಯಿಂದ ಪ್ರತಿಭಟನೆ - Protest in Hubballi against gas price raise in Hubli

ಕೂಡಲೇ ಬೆಲೆ ಇಳಿಕೆ ಮಾಡಬೇಕು. ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು..

Protest in Hubli against Cylinder price raise
ಹುಬ್ಬಳ್ಳಿ: ಗ್ಯಾಸ್ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

By

Published : Feb 15, 2021, 3:55 PM IST

ಹುಬ್ಬಳ್ಳಿ: ಸಿಲಿಂಡರ್ ಮತ್ತು ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ಶಿವಸೇನಾ ಕಾರ್ಯಕರ್ತರು ಸಿಲಿಂಡರ್ ಹಾಗೂ ಪೆಟ್ರೋಲ್‌ನ ಕೈಯಲ್ಲಿ ಹಿಡಿದು ವಿನೂತನವಾಗಿ ಪ್ರತಿಭಟಿಸಿದರು.

ವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು, ಕೊರೊನಾದಿಂದ ಸಾರ್ವಜನಿಕರು ಹೈರಣಾಗಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಎಲ್ಲಾ ದಿನಸಿ ವಸ್ತುಗಳು ಹಾಗೂ ತೈಲ ಬೆಲೆ ಏರಿಕೆ ಮಾಡಿ ಸಾರ್ವಜನಿಕರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಕೂಡಲೇ ಬೆಲೆ ಇಳಿಕೆ ಮಾಡಬೇಕು. ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ತಹಿಶೀಲ್ದಾರ್‌ರ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details