ಹುಬ್ಬಳ್ಳಿ:ಅಂಜುಮನ್ ಇ ಇಸ್ಲಾಂ ಸಂಸ್ಥೆಯ ನೇತೃತ್ವದಲ್ಲಿ ಇಂದು ಅಲ್ತಾಫ್ ನಗರ, ಎನ್.ಎ.ನಗರ, ಈಶ್ವರ ನಗರ, ಜನತನಗರದ ನಿವಾಸಿಗಳು ಎನ್ಆರ್ಸಿ ಮತ್ತು ಸಿಎಎ ವಿರೋಧಿಸಿ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ಕೂಡಲೇ ಎನ್ಆರ್ಸಿ ಹಾಗೂ ಸಿಎಎಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ರು.
ಎನ್ಆರ್ಸಿ ಮತ್ತು ಸಿಎಎ ವಿರೋಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಇನ್ನೂ ಒಂದು ವಾರದವರೆಗೆ ನಡೆಯಲಿರುವ ಈ ಪ್ರತಿಭಟನೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಡೆಯಲಿದೆ. ಈ ವೇಳೆ ಒಂದೊಂದು ದಿನ ನಗರದ ನಾಲ್ಕು ನಗರದ ನಿವಾಸಿಗಳು ಪ್ರತಿಭಟನೆ ಮಾಡಲಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಐ.ಜಿ.ಸನದಿ, ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಎಂಎಲ್ಸಿ ಇಸ್ಮಾಯಿಲ್ ಕಾಲೇಬುಡೆ, ಸಂಸ್ಥೆಯ ಅಧ್ಯಕ್ಷ ಮಹಮ್ಮದ್ ಯೂಸುಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರ, ಬಸೀರ ಹಳ್ಳೂರ ಸೇರಿದಂತೆ ಮುಂತಾದವರು ಇದ್ದರು.