ಹುಬ್ಬಳ್ಳಿ:ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸಂದರ್ಭ ಲಾಠಿಚಾರ್ಜ್ ನಡೆಸಿ ರಾಯಣ್ಣನ ಮೂರ್ತಿಯನ್ನು ಹಾಗೂ ರಾಷ್ಟ್ರಧ್ವಜ ವಶಪಡಿಸಿಕೊಂಡಿರುವುದನ್ನು ವಿರೋಧಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿಯ ರಾಯಣ್ಣ ಪ್ರತಿಮೆ ತೆರವು ವಿರೋಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ - Rayanna statue
ಹುಬ್ಬಳ್ಳಿಯ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನಿಗೆ ಹಾಗೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಕೋಮುವಾದಿ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹುಬ್ಬಳ್ಳಿಯ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನಿಗೆ ಹಾಗೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಕೋಮುವಾದಿ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಅಹಿಂದ ವರ್ಗದ ಮೇಲೆ ಪದೇ ಪದೇ ಅನ್ಯಾಯ ಆಗುತ್ತಿದೆ. ಕಳೆದ ಬಾರಿ ಚಿಕ್ಕನಾಯಕನಹಳ್ಳಿಯಲ್ಲಿ ಕನಕದಾಸರ ವೃತ್ತವನ್ನು ತೆರವುಗೊಳಿಸಿದ್ದರು. ಏಕಾಏಕಿ ಲಾಠಿಚಾರ್ಜ್ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಜರುಗಿಸಿ, ಮುಂಬರುವ ದಿನಗಳಲ್ಲಿ ಈ ರೀತಿ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.