ಹುಬ್ಬಳ್ಳಿ: ಪೂರ್ವ ಲಡಾಖ್ ಗಡಿಯಲ್ಲಿ ಚೀನಾ ನಡೆಸಿದ ದಾಳಿಯನ್ನು ಖಂಡಿಸಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ನಗರದ ದುರ್ಗದಬೈಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಗಡಿಯಲ್ಲಿನ ಚೀನಾ ದಾಳಿ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ - Protest in Hubli
ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಮತ್ತು ಚೀನಾ ನಡುವಿನ ಸಂಘರ್ಷದಲ್ಲಿ ಸಾವು-ನೋವು ಸಂಭವಿಸಿದೆ. ಹಲವೆಡೆ ಚೀನಾ ನಡೆಯನ್ನು ಖಂಡಿಸಿ ಭಾರತೀಯರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಸದ್ಯ ಹುಬ್ಬಳ್ಳಿಯಲ್ಲಿಯೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವುದರ ಮೂಲಕ ಕಿಡಿಕಾರಿದ್ದಾರೆ.
Protest in Hubli
ಚೀನಾ ಅಧ್ಯಕ್ಷರ ಭಾವಚಿತ್ರ ಹರಿದು ಹಾಕಿ ಚೀನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಪಕ್ಷದ ನೂರಾರು ಕಾರ್ಯಕರ್ತರು ಚೀನಾ ವಿರುದ್ಧ ಘೋಷಣೆ ಕೂಗಿ ಚೀನಾದ ನಡೆಯನ್ನು ಖಂಡಿಸಿದರು.
ದಾಳಿಯಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಾಚರಣೆ ಮಾಡಿದರು. ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ಚೀನಾ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.