ಹುಬ್ಬಳ್ಳಿ: ಉತ್ತರಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ-ಹತ್ಯೆ ಪ್ರಕರಣ ಖಂಡಿಸಿ ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಕಾಂಗ್ರೆಸ್ ಮುಖಂಡೆ ಶ್ರೇಯಾ ಹಿರೇಕೆರೂರ ನೇತೃತ್ವದಲ್ಲಿ ಕಿಮ್ಸ್ ವಿದ್ಯಾರ್ಥಿಗಳು ಹಾಗೂ ವಿವಿಧ ಮುಖಂಡರು ಕ್ಯಾಂಡಲ್ ಹಿಡಿದು ನಿನ್ನೆ ರಾತ್ರಿ ಮೌನ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಹಥ್ರಾಸ್ ಪ್ರಕರಣ ಖಂಡಿಸಿ ಮೊಂಬತ್ತಿ ಹಚ್ಚಿ ಮೌನ ಪ್ರತಿಭಟನೆ - hubli latest news
ಹಥ್ರಾಸ್ ಅತ್ಯಾಚಾರ-ಹತ್ಯೆ ಪ್ರಕರಣ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಲೇ ಇದೆ. ನಿನ್ನೆ ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಕಾಂಗ್ರೆಸ್ ಮುಖಂಡೆ ಶ್ರೇಯಾ ಹಿರೇಕೆರೂರ ನೇತೃತ್ವದಲ್ಲಿ ಕಿಮ್ಸ್ ವಿಧ್ಯಾರ್ಥಿಗಳು ಹಾಗೂ ವಿವಿಧ ಮುಖಂಡರು ಕ್ಯಾಂಡಲ್ ಹಿಡಿದು ಮೌನ ಪ್ರತಿಭಟನೆ ನಡೆಸಿದರು.
![ಹುಬ್ಬಳ್ಳಿ: ಹಥ್ರಾಸ್ ಪ್ರಕರಣ ಖಂಡಿಸಿ ಮೊಂಬತ್ತಿ ಹಚ್ಚಿ ಮೌನ ಪ್ರತಿಭಟನೆ Protest in hubli condemning a Hathras case](https://etvbharatimages.akamaized.net/etvbharat/prod-images/768-512-9092299-thumbnail-3x2-hubli.jpg)
ಉತ್ತರಪ್ರದೇಶ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಉತ್ತರಪ್ರದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪಿಗಳ ರಕ್ಷಣೆಗೆ ಸರ್ಕಾರ ನಿಂತಿರುವುದು ದುರದೃಷ್ಟಕರ ಸಂಗತಿ. ಅತ್ಯಾಚಾರಿಗಳನ್ನು ಮಟ್ಟ ಹಾಕುವಲ್ಲಿ ಯೋಗಿ ಅದಿತ್ಯನಾಥ ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಯುಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಕೂಡಲೇ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಪ್ರತಿಭಟನೆಯಲ್ಲಿ ನೂರಾರು ಕಿಮ್ಸ್ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಯ ಮುಖಂಡರು ಭಾಗಿಯಾಗಿದ್ದರು.