ಹುಬ್ಬಳ್ಳಿ: ಲಿಂಗಾಯತ ಸಮುದಾಯಕ್ಕೆ ನೀಡುತ್ತಿರುವ ಜಾತಿ ಪ್ರಮಾಣಪತ್ರದಲ್ಲಿ ಲೋಪದೋಷಗಳು ಕಂಡು ಬರುತ್ತಿದ್ದು, ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ಲಿಂಗಾಯತ ಧರ್ಮ ಮಹಾಸಭಾದಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
ಲಿಂಗಾಯತ ಜಾತಿ ಪ್ರಮಾಣಪತ್ರದಲ್ಲಿನ ದೋಷ ಸರಿಪಡಿಸುವಂತೆ ಒತ್ತಾಯ - Lingayata dharma maha saba
ಲಿಂಗಾಯತ ಸಮುದಾಯಕ್ಕೆ ನೀಡುತ್ತಿರುವ ಜಾತಿ ಪ್ರಮಾಣಪತ್ರದಲ್ಲಿ ವೀರಶೈವ ಲಿಂಗಾಯತ ಎಂದು ಬರುತ್ತಿದ್ದು, ಕೂಡಲೇ ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಲಿಂಗಾಯತ ಧರ್ಮ ಮಹಾಸಭಾದಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ
ದಾಖಲಾತಿಯಲ್ಲಿ ಲಿಂಗಾಯತ ಎಂದು ಬರೆಸಿದರೂ ಕೂಡ ಹೊಸ ಎಸ್ಎಟಿಎಸ್ ತಂತ್ರಾಂಶದಲ್ಲಿ ಲಿಂಗಾಯತ ಬದಲಿಗೆ ವೀರಶೈವ ಲಿಂಗಾಯತ ಎಂದು ಬರುತ್ತಿದೆ. ಕೂಡಲೇ ಈ ಗೊಂದಲವನ್ನು ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವೀರಶೈವ ಲಿಂಗಾಯತ ಎಂದು ಬರುತ್ತಿರುವುದರಿಂದ ನಮಗೆ ತೀವ್ರ ಮುಜುಗುರವಾಗುತ್ತಿದೆ. ವೀರಶೈವ ಲಿಂಗಾಯತ ಬದಲಿಗೆ ಕೇವಲ ಲಿಂಗಾಯತ ಎನ್ನುವ ಜಾತಿ ಪ್ರಯಾಣಪತ್ರ ನೀಡುವ ಮೂಲಕ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.