ಧಾರವಾಡ:ಬೈಪಾಸ್ ರಸ್ತೆಯನ್ನು ಷಟ್ಪಥ ರಸ್ತೆ ಮಾಡಬೇಕೆಂದು ಆಗ್ರಹಿಸಿ ಧಾರವಾಡ ಹಾಗೂ ಅಕ್ಕಪಕ್ಕದ ಬಡಾವಣೆಗಳ ನಿವಾಸಿಗಳು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಧಾರವಾಡ ಷಟ್ಪಥ ರಸ್ತೆಗೆ ಆಗ್ರಹ: ಅಶೋಕ ಖೇಣಿ ವಿರುದ್ಧ ಧಿಕ್ಕಾರ - Dharwad latest News
ಧಾರವಾಡ ಬೈಪಾಸ್ ರಸ್ತೆಯನ್ನು ಷಟ್ಪಥ ರಸ್ತೆ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ನಿವಾಸಿಗಳು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಕೆಲಗೇರಿ ಪಕ್ಕದಲ್ಲಿರುವ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿ, ಅಶೋಕ ಖೇಣಿ ವಿರುದ್ದ ಧಿಕ್ಕಾರ ಕೂಗಿದರು. ಸಂಕ್ರಮಣ ದಿನ ರಸ್ತೆ ಅಪಘಾತದಲ್ಲಿ ಮೃತರಾದ ಸಹೋದರಿಯರಿಗೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಕಳೆದ 20 ವರ್ಷದಲ್ಲಿ ಬೈಪಾಸ್ ರಸ್ತೆಯಲ್ಲಿ 1200 ಅಮಾಯಕ ಜನರು ಜೀವ ಕಳೆದುಕೊಂಡಿದ್ದಾರೆ. ಹೆದ್ದಾರಿ ರಸ್ತೆ ಕಿಲ್ಲರ್ ಬೈಪಾಸ್ ಆಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರು ಲೈನ್ ರಸ್ತೆ ಮಾಡಬೇಕು ಎಂದು ಆಗ್ರಹಿಸಿದರು. ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ ಖೇಣಿ ಬೈಪಾಸ್ ಅನ್ನು ಆರು ಲೈನ್ಗಳಲ್ಲಿ ಮಾಡದಿದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.