ಕರ್ನಾಟಕ

karnataka

ETV Bharat / state

ಟಿಪ್ಪು ಜಯಂತಿ ರದ್ದತಿ ವಿರೋಧಿಸಿ ಸಮತಾ ಸೈನಿಕದಳ ಪ್ರತಿಭಟನೆ

ಟಿಪ್ಪುಸುಲ್ತಾನ್ ಜಯಂತಿ ರದ್ದು ಪಡಿಸಿದ ಹಿನ್ನೆಲೆಯಲ್ಲಿ ಸಮತಾ ಸೈನಿಕದಳ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರ ವಿರುದ್ಧ ಘೋಷಣೆಯನ್ನು ಕೂಗಿ ರದ್ದತಿ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ಟಿಪ್ಪುಸುಲ್ತಾನ್ ಜಯಂತಿ ರದ್ದು ಪಡಿಸಿರುವುದನ್ನು ಖಂಡಿಸಿ ಪ್ರತಿಭಟನೆ

By

Published : Aug 4, 2019, 6:02 AM IST

ಹುಬ್ಬಳ್ಳಿ: ಮುಖ್ಯಮಂತ್ರ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಟಿಪ್ಪು ಸುಲ್ತಾನ್​ ಜಯಂತಿ ರದ್ದು ಪಡಿಸಿರುವುದನ್ನು ಖಂಡಿಸಿ ಸಮತಾ ಸೈನಿಕದಳದ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ತಹಶಿಲ್ದಾರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ನೂರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದದ್ದು,ತಹಶಿಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ‌ ಸಲ್ಲಿಸಿದರು. ಈ ವೇಳೆ ಸಂಘಟನೆಯ ಮುಖಂಡರೊಬ್ಬರು ಮಾತನಾಡಿ, ಸ್ವತಂತ್ರ ಹೋರಾಟಗಾರ ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದು ಖಂಡನಿಯ. ಶೀಘ್ರವಾಗಿ ಟಿಪ್ಪು ಸುಲ್ತಾನ್ ಜಯಂತಿ ರಾಜ್ಯಾದ್ಯಂತ ಆಚರಿಸುವಂತೆ ಆದೇಶವನನ್ನು ಸರ್ಕಾರ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಟಿಪ್ಪು ಸುಲ್ತಾನ್ ಜಯಂತಿ ರದ್ದು ಪಡಿಸಿರುವುದನ್ನು ಖಂಡಿಸಿ ಸಮತಾ ಸೈನಿಕದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ರಾಜ್ಯದಲ್ಲಿ ಕೋಮುವಾದವನ್ನು ಹುಟ್ಟು ಹಾಕುವ ಮೂಲಕ ಮುಸ್ಲಿಂ ಧರ್ಮದ ಆಚರಣೆಗೆ ಸರ್ಕಾರ ದಕ್ಕೆಯನ್ನುಂಟು ಮಾಡುತ್ತಿರುವುದು ಸರಿಯಲ್ಲ ಎಂದು ಗಂಭೀರವಾಗಿ ಆರೋಪಿಸಿದರು. ಶೀಘ್ರದಲ್ಲಿಯೇ ನಮ್ಮ ಮನವಿಯನ್ನು ಪರಿಗಣಿಸಿ ಸರ್ಕಾರ ಜಯಂತಿಯನ್ನು ಆಚರಿಸಲು ಆದೇಶಿಸಬೇಕು. ಇಲ್ಲವಾದರೇ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details