ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ - undefined

ಹುಬ್ಬಳ್ಳಿಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಕುಂದಗೋಳ ಪಟ್ಟಣದ ತಹಶೀಲ್ದಾರರ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಸಾಲಮನ್ನಾ ಹಾಗೂ ವಿವಿಧ ಬೇಡಿಕೆ ಕುರಿತು ರೈತರ ಪ್ರತಿಭಟನೆ

By

Published : Jun 15, 2019, 1:03 PM IST

ಹುಬ್ಬಳ್ಳಿ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಕೂಲಿ ಕಾರ್ಮಿಕರು ಕುಂದಗೋಳ ಪಟ್ಟಣದ ತಹಸೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಪೂರ್ಣ ಸಾಲಮನ್ನಕ್ಕಾಗಿ ರೈತರ ಪ್ರತಿಭಟನೆ

ಇದೇ ವೇಳೆ ಪ್ರತಿಭಟನಾ ರೈತರು, ಸರ್ಕಾರ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಬೆಳೆ ವಿಮೆಯಲ್ಲಿ ನಡೆಯುತ್ತಿರುವ ತಾರತಮ್ಯ ಹೊಗಲಾಡಿಸಬೇಕು, ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಉದ್ಯೋಗ ಒದಗಿಸುವಲ್ಲಿ ಮುಂದಾಗಬೇಕು ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೇಜು ಬ್ಯಾಂಕ್ ತೆರೆಯುವ ಮೂಲಕ ರೈತರ ಹಸುಗಳಿಗೆ ಮೇವನ್ನು ಒದಗಿಸಬೇಕು ಎಂದು ಬೇಡಿಕೆ ಇಟ್ಟರು.

ಇದರೊಂದಿಗೆ ಮುಖ್ಯವಾಗಿ ತಾಲೂಕಿನಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸು ಕುರಿತು ಪ್ರತಿಭಟನೆಯಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರು.

For All Latest Updates

TAGGED:

ABOUT THE AUTHOR

...view details