ಧಾರವಾಡ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಹಥ್ರಾಸ್ ಅತ್ಯಾಚಾರ ಪ್ರಕರಣ: ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ - Hathras rape case
ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಧಾರವಾಡ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಧಾರವಾಡದ ಜುಬಲಿ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಅತ್ಯಾಚಾರವೆಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕ್ರಮ ಕೈಗೊಂಡು ಯುವತಿಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.