ಹುಬ್ಬಳ್ಳಿ:ಸ್ಮಾರ್ಟ್ ಸಿಟಿ ಯೋಜನೆಯಡಿ ಹೈಟೆಕ್ ಸ್ಟಾಲ್ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಹೆಗ್ಗೇರಿಯಲ್ಲಿನ ಡಾ. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಸ್ಟಾಲ್ ಸ್ಥಳಾಂತರಕ್ಕೆ ವಿರೋಧಿಸಿ ಹಳೇ ಹುಬ್ಬಳ್ಳಿಯ ಕಿಲ್ಲಾ ವರ್ತಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಾತ್ಕಾಲಿಕ ಸ್ಟಾಲ್ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ - Hubli latest news
ಹೆಗ್ಗೇರಿಯಲ್ಲಿನ ಅಂಬೇಡ್ಕರ್ ಮೈದಾನದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ಹೈಟೆಕ್ ಮಾರ್ಕೆಟ್ ನಿರ್ಮಾಣ ಖಂಡಿಸಿ ಹಳೇ ಹುಬ್ಬಳ್ಳಿಯ ಕಿಲ್ಲಾ ವರ್ತಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
Hubli
ಹು-ಧಾ ಮಹಾನಗರದಲ್ಲಿ ಸಾಕಷ್ಟು ಕಡೆಗಳಲ್ಲಿ ಖುಲ್ಲಾ ಜಾಗವಿದ್ದರೂ ಕೂಡ ಹೆಗ್ಗೇರಿಯಲ್ಲಿನ ಅಂಬೇಡ್ಕರ್ ಮೈದಾನದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ಹೈಟೆಕ್ ಮಾರ್ಕೆಟ್ ನಿರ್ಮಾಣಕ್ಕೆ ಮುಂದಾಗಿರುವುದು ಖಂಡನೀಯವಾಗಿದೆ. ಅಲ್ಲದೆ ಇಲ್ಲಿ ಹೈಟೆಕ್ ಮಾರ್ಕೆಟ್ ನಿರ್ಮಾಣವಾದರೆ ಅದು ನಮ್ಮಂತಹ ಪಲಾನುಭವಿಗಳಿಗೆ ಸೇರುವುದಿಲ್ಲ. ಇದರಿಂದ ಕಿಲ್ಲಾ ವರ್ತಕರು ಬೀದಿಪಾಲಾಗುತ್ತಾರೆ ಎಂದು ದೂರಿದರು.
ಈ ವೇಳೆ ಶಾಸಕರು, ಪ್ರತಿಭಟನಾಕಾರರು ಹಾಗೂ ಜನಪ್ರತಿನಿಧಿಗಳು ಸೇರಿದಂತೆ ಸ್ಥಳೀಯರು ಪಾಲಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.