ಧಾರವಾಡ:ದೇಶದ ಯಾವುದೇ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ದೇಶದ ಯಾವುದೇ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು, ರೋಗ ಲಕ್ಷಣಗಳಿಲ್ಲದಿದ್ದರೂ ಸಹ ಮುಂಜಾಗ್ರತಾ ಕ್ರಮವಾಗಿ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಬೇಕು.
ಹೊರ ರಾಜ್ಯಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಧಾರವಾಡ ಡಿಸಿ - Quarantine is compulsory for travelers
ಹೊರ ರಾಜ್ಯಗಳಿಂದ ಆಗಮಿಸುವ ಎಲ್ಲರೂ ಕಡ್ಡಾಯವಾಗಿ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಸ್ಥಾಪಿಸಲಾಗಿರುವ ನೋಂದಣಿ ಮತ್ತು ವೈದ್ಯಕೀಯ ತಪಾಸಣೆ ಕೇಂದ್ರಕ್ಕೆ ಭೇಟಿ ನೀಡಿ ಕ್ವಾರಂಟೈನ್ಗೆ ಒಳಪಡಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಈ ಸೌಲಭ್ಯಕ್ಕಾಗಿ ಶಾಲೆ, ಹಾಸ್ಟೆಲ್, ಕಲ್ಯಾಣ ಮಂಟಪಗಳಂತಹ ಕಟ್ಟಡ ಗುರುತಿಸಲಾಗಿದೆ. ಸ್ವತಃ ವೆಚ್ಚ ಭರಿಸಲು ಸಿದ್ಧ ಇರುವವರಿಗೆ ಹೋಟೆಲ್ಗಳಲ್ಲಿಯೂ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲಾಗುವುದು.
ಹೊರ ರಾಜ್ಯಗಳಿಂದ ಆಗಮಿಸುವ ಎಲ್ಲರೂ ಕಡ್ಡಾಯವಾಗಿ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಸ್ಥಾಪಿಸಲಾಗಿರುವ ನೋಂದಣಿ ಮತ್ತು ವೈದ್ಯಕೀಯ ತಪಾಸಣೆ ಕೇಂದ್ರಕ್ಕೆ ಭೇಟಿ ನೀಡಿ ಕ್ವಾರಂಟೈನ್ಗೆ ಒಳಪಡಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು. ಜಿಲ್ಲೆಯ ಜನರು ತಮ್ಮ ಊರು, ಬಡಾವಣೆ, ಅಕ್ಕಪಕ್ಕದ ಮನೆಗಳಿಗೆ ಬೇರೆ ರಾಜ್ಯಗಳಿಂದ ಜನರು ಆಗಮಿಸಿದ್ದರೆ ಆ ಕುರಿತು ಸಹಾಯವಾಣಿ ಸಂಖ್ಯೆಗೆ ಮಾಹಿತಿ ನೀಡಿ ಕೊರೊನಾ ವಿರುದ್ಧದ ಹೋರಾಟಕ್ಕೆ ಸಹಕರಿಸಬೇಕು ಎಂದಿದ್ದಾರೆ.