ಹುಬ್ಬಳ್ಳಿ:ಶಾಲಾ-ಕಾಲೇಜುಗಳನ್ನು ಪ್ರಾರಂಭ ಮಾಡುವುದರಲ್ಲಿ ಸರ್ಕಾರ ಗೊಂದಲ ಸೃಷ್ಟಿ ಮಾಡುತ್ತಿದೆ. ಇದನ್ನು ನೋಡಿದರೆ ಸರ್ಕಾರ ಖಾಸಗಿ ಶಾಲಾ-ಕಾಲೇಜುಗಳ ಒತ್ತಡಕ್ಕೆ ಮಣಿಯುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಪಶ್ಚಿಮ ಪದವೀಧರರ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಮಹಾಮಾರಿಯಿಂದ ವಿದ್ಯಾರ್ಥಿಗಳ ಭವಿಷ್ಯ ನಲುಗಿ ಹೋಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಇಲ್ಲಿಯವರೆಗೆ ಉನ್ನತ ಶಿಕ್ಷಣದ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಗಳು ನಡೆದಿಲ್ಲ. ಅಲ್ಲದೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿಲ್ಲ. ಪಿಯುಪಿ ದ್ವಿತೀಯ ವರ್ಷದ ಒಂದು ಪರೀಕ್ಷೆ ಕೂಡಾ ಬಾಕಿಯಿದೆ. ಇಂತಹ ಸಮಯದಲ್ಲಿ ಶಾಲಾ-ಕಾಲೇಜುಗಳ ಪ್ರಾರಂಭದ ಬಗ್ಗೆ ಶಿಕ್ಷಣ ಸಚಿವರು ದಿನಕ್ಕೆ ಒಂದೊಂದು ಹೇಳಿಕೆ ನೀಡುವುದು ಖಂಡನೀಯ ಎಂದರು.