ಹುಬ್ಬಳ್ಳಿ:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಅಮೃತಮಹೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ನಿನ್ನೆ ರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಇಂದು ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಉಪಹಾರ ಸೇವಿಸಿದ ಬಳಿಕ ರಸ್ತೆ ಮಾರ್ಗವಾಗಿ ಚಿತ್ರದುರ್ಗ ಪ್ರಯಾಣ ಬೆಳೆಸಿದ ರಾಹುಲ್ ಗಾಂಧಿ ಜೊತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಚಿತ್ರದುರ್ಗಕ್ಕೆ ತೆರಳಿದ್ದಾರೆ.