ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂ ಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಮೂಲಕ ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ.
ವರುಣನ ಆರ್ಭಟಕ್ಕೆ ಹಲವೆಡೆ ಭೂಕುಸಿತ: ಹಳಿತಪ್ಪಿದ ಮಂಗಳೂರು-ಮುಂಬೈ ರೈಲು..ಪ್ರಯಾಣಿಕರ ಪರದಾಟ! - Rail way shutdown due to heavy rain
ಎರಡು ಕಡೆ ಭೂ ಕುಸಿತವಾಗಿದ್ದು, ರೈಲ್ವೆ ಪ್ರಯಾಣಿಕರನ್ನು ಬಸ್ ಮೂಲಕ ಅವರವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ.
ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಹಿನ್ನೆಲೆ ಮಂಗಳೂರು - ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಎಕ್ಸ್ಪ್ರೆಸ್ ರೈಲಿನ ಬೋಗಿಯೊಂದು ಹಳಿ ತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಅವರನ್ನು ಬೇರೆ ಬೋಗಿಗಳಿಗೆ ಸ್ಥಳಾಂತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ.
ಇನ್ನೂ ಹಜರತ್ ನಿಜಾಮುದ್ದೀನ್- ವಾಸ್ಕೊ-ಡಿ- ಗಾಮಾ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೂ ಅಡ್ಡಿಯಾಗಿದೆ. ಎರಡೂ ರೈಲುಗಳಲ್ಲಿ ಇದ್ದ ಸಾವಿರಕ್ಕೂ ಹೆಚ್ಚು ಪ್ರಯಾಣಿಕರನ್ನು ಬಸ್ಗಳ ಮೂಲಕ ಬೆಳಗಾವಿ, ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಬರಲಾಗಿದೆ. ರೈಲ್ವೆ ಮಾರ್ಗಗಳ ದುರಸ್ತಿ ಕಾರ್ಯವೂ ಆರಂಭಗೊಂಡಿದೆ.