ಕರ್ನಾಟಕ

karnataka

ಕೆಲಸದಿಂದ ವಜಾ.. ರೈಲ್ವೆ ಸ್ವಚ್ಛತಾ ಕಾರ್ಮಿಕರ ಅರೆಬೆತ್ತಲೆ ಪ್ರತಿಭಟನೆ

By

Published : Dec 19, 2022, 5:43 PM IST

Updated : Dec 19, 2022, 7:51 PM IST

ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ತೆಗೆದುಕೊಂಡಿದ್ದ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಹಿನ್ನೆಲೆ ಕಾರ್ಮಿಕರು ರಸ್ತೆಗಿಳಿದು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

railway cleaning workers protest in hubli
ರೈಲ್ವೆ ಸ್ವಚ್ಛತಾ ಕಾರ್ಮಿಕರ ಅರೆಬೆತ್ತಲೆ ಪ್ರತಿಭಟನೆ

ರೈಲ್ವೆ ಸ್ವಚ್ಛತಾ ಕಾರ್ಮಿಕರ ಅರೆಬೆತ್ತಲೆ ಪ್ರತಿಭಟನೆ

ಹುಬ್ಬಳ್ಳಿ: ಕಳೆದ ಹಲವು ವರ್ಷಗಳಿಂದ ನೈಋತ್ಯ ರೈಲ್ವೆ ವಲಯದ ಸಿದ್ದಾರೂಢ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಿದ್ದ ಗುತ್ತಿಗೆ ಆಧಾರದ ನೌಕರರನ್ನು, ಕೆಲಸದಿಂದ ವಜಾಗೊಳಿಸಿರುವ ಹಿನ್ನೆಲೆ ಕಾರ್ಮಿಕರು ಇಂದು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ನಗರದ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಚೆನ್ನಮ್ಮ ವೃತ್ತ ತಲುಪಿ ಬಳಿಕ ಅಲ್ಲಿಂದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ವರೆಗೆ ಅರೆಬೆತ್ತಲೆಯ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಈ ಕುರಿತು ಕೂಡಲೇ ನ್ಯಾಯ ಒದಗಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತೆಗಾಗಿ ತಿವಾರಿ ಎನ್ನುವ ಗುತ್ತಿಗೆದಾರ 95 ಜನ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಂಡಿದ್ದರು.

ಆದರೆ ಕಳೆದ ಮೂರು ದಿನಗಳ ಹಿಂದೆ ಕಾರ್ಮಿಕರಿಗೆ ಕೆಲಸಕ್ಕೆ ಬರಬೇಡಿ. ಹೊಸ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದೇವೆಂದು ಹೇಳಿ ಎಲ್ಲರನ್ನೂ ಕೆಲಸದಿಂದ ತೆಗೆದುಹಾಕಿ ನೋಟಿಸ್​ ನೀಡಲಾಗಿತ್ತು. ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹಿಸಿ ಮೂರು ದಿನಗಳಿಂದ ರೈಲ್ವೆ ನಿಲ್ದಾಣ ಆವರಣದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಜೈನ ಸಮಾಜದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ: ಮಹೇಂದ್ರ ಸಿಂಘಿ

Last Updated : Dec 19, 2022, 7:51 PM IST

ABOUT THE AUTHOR

...view details