ಹುಬ್ಬಳ್ಳಿ: ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ನಗರದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಈಜು ಕೊಳದಂತಾದ ಮನೆಗಳು - ಹುಬ್ಬಳ್ಳಿ ಮಳೆ ಸುದ್ದಿ
ನಿರಂತರವಾಗಿ ಸುರಿಯುತ್ತಿರು ಮಳೆಯಿಂದಾಗಿ ಹುಬ್ಬಳ್ಳಿ ನಗರದ ಹಲವು ಮನೆಗಳಿಗೆ ನೀರು ನುಗ್ಗಿದೆ.
ಹುಬ್ಬಳ್ಳಿಯಲ್ಲಿ ನಿರಂತರ ಮಳೆ: ಈಜು ಕೊಳದಂತಾದ ಮನೆಗಳು
ಆನಂದ ನಗರದ ಬಳಿ ಇರುವ ಗಣೇಶ ನಗರದಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿದೆ. ಪರಿಣಾಮ ಮನೆಗಳು ಈಜು ಕೊಳದಂತಾಗಿದ್ದು, ಮನೆಯವರಿಗೆ ಮಲಗಲು ಕೂಡ ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದರೆ ಪ್ರತೀ ಬಾರಿ ಇಂತಹ ಸಮಸ್ಯೆ ಉಂಟಾಗುತ್ತದೆ. ಅಷ್ಟೇ ಅಲ್ಲದೆ ತಮ್ಮ ಸಮಸ್ಯೆ ಬಗ್ಗೆ ದೂರವಾಣಿ ಮೂಲಕ ಅಧಿಕಾರಿಗಳಿಗೆ ತಿಳಿಸಿದರು ಕೂಡ ಅಧಿಕಾರಿಗಳು ನಮಗೆ ಸ್ಪಂದನೆ ಮಾಡುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇದೇ ರೀತಿಯಾದರೆ ಹೋರಾಟದ ಹಾದಿ ತುಳಿಯಬೇಕಾಗುತ್ತೆ ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.