ಧಾರವಾಡ:ರಾಜ್ಯದಲ್ಲಿ ಕಾರ್ತಿಕ ಮುಗಿಯುವವರೆಗೂ ಮಳೆ ಮುಂದುವರೆಯಲಿದೆ ಎಂದು ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಕಾರ್ತಿಕ ಮಾಸ ಮುಗಿಯೋವರೆಗೂ ರಾಜ್ಯದಲ್ಲಿ ಮಳೆ ನಿಲ್ಲೋದಿಲ್ಲ: ಕೋಡಿಮಠ ಶ್ರೀ ಭವಿಷ್ಯ - ಕಾರ್ತಿಕ ಮುಗಿಯೋವರೆಗೂ ರಾಜ್ಯದಲ್ಲಿ ಮಳೆ
ರಾಜ್ಯದಲ್ಲಿ ಕಾರ್ತಿಕ ಮಾಸದವರೆಗೆ ಮಳೆ ಮುಂದುವರೆಯಲಿದೆ ಎಂದು ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಕೋಡಿಮಠ ಶಿವಾನಂದ ರಾಜೇಂದ್ರ ಸ್ವಾಮೀಜಿ
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೂ ಮಳೆ ಹೆಚ್ಚಾಗುವ ಲಕ್ಷಣ ಇದೆ. ಕಾರ್ತಿಕ ಕಳೆಯುವವರೆಗೂ ಮಳೆ ಇರುತ್ತದೆ. ಸದ್ಯ ಪ್ರಕೃತಿ ವಿಕೋಪವಾಗಿದೆ. ಏನೂ ಮಾಡಲು ಆಗುವುದಿಲ್ಲ ಎಂದರು.
ಅನಾಹುತಗಳು ಹೆಚ್ಚಾಗುವ ಸಾಧ್ಯತೆ ಇದೆ. ಸಂಕ್ರಾಂತಿವರೆಗೂ ಮಳೆ ಇರಲಿದೆ ಎಂದರು. ಇದೇ ವೇಳೆ ರಾಜಕೀಯದ ಬಗ್ಗೆ ಭವಿಷ್ಯ ಹೇಳಲು ನಿರಾಕರಿಸಿದರು.