ಧಾರವಾಡ:ಕನಾಟಕ ಸರ್ಕಾರ ಕೊಡಮಾಡುವ 2018ನೇ ಸಾಲಿನ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯನ್ನು ಸಮಾಜ ಪರಿವರ್ತನಾ ಟ್ರಸ್ಟ್ನ ಎಸ್.ಆರ್.ಹಿರೇಮಠ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್.ರಂಗಪ್ಪ ಪ್ರದಾನ ಮಾಡಿದರು.
ಸಾಮಾಜಿಕ ಹೋರಾಟಗಾರ ಹಿರೇಮಠಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ - ಧಾರವಾಡ ಸುದ್ದಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಮ್ಮ ಕೆಲಸದ ಒತ್ತಡದ ಮಧ್ಯೆ ಧಾರವಾಡ ಕಚೇರಿಗೆ ಬಂದು ಪ್ರಶಸ್ತಿ ಪ್ರದಾನ ಮಾಡಿರುವುದು ಸಂತೋಷ ತಂದಿದೆ ಎಂದು ಎಸ್.ಆರ್. ಹಿರೇಮಠ ಸಂತಸ ವ್ಯಕ್ತಪಡಿಸಿದರು.
ಎಸ್.ಆರ್. ಹಿರೇಮಠ
ಪ್ರಶಸ್ತಿ ಸ್ವೀಕರಿಸಿದ ಬಳಿಕ ಎಸ್.ಆರ್.ಹಿರೇಮಠ ಮಾತನಾಡಿ, ಕೆಲಸದ ನಿಮಿತ್ತ ಪುಣೆಗೆ ಹೋಗಿದ್ದರಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಮ್ಮ ಕೆಲಸದ ಒತ್ತಡದ ಮಧ್ಯೆ ಧಾರವಾಡ ಕಚೇರಿಗೆ ಬಂದು ಪ್ರಶಸ್ತಿ ಪ್ರದಾನ ಮಾಡಿರುವುದು ಸಂತೋಷ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ ಚಲವಾದಿ, ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಬೇಂದ್ರೆ ಭವನದ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಇದ್ದರು.