ಹುಬ್ಬಳ್ಳಿ:ಉತ್ತರ ಕರ್ನಾಟಕ ಭಾಗದ ಮತ್ತೊರ್ವ ಜೆಡಿಎಸ್ ಹಿರಿಯ ಮುಖಂಡ ಪಕ್ಷ ತೊರೆದು ಕಮಲ ಪಾಳಯ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಣ್ಣ ಕೊರವಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಣ್ಣ ಕೊರವಿ ಹುಬ್ಬಳ್ಳಿ ಧಾರವಾಡದಲ್ಲಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೇ ಜೆಡಿಎಸ್ ಪಕ್ಷದಿಂದ ಜಗದೀಶ ಶೆಟ್ಟರ್ ವಿರುದ್ಧ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.