ಕರ್ನಾಟಕ

karnataka

ETV Bharat / state

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ದೇಶದ ಜನರ ಕನಸಾಗಿತ್ತು: ಸಚಿವ ಶೆಟ್ಟರ್​​​​​

ನಾಳೆಯ ದಿನ ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಗಿದೆ. ಲಾಲ್​ ಕೃಷ್ಣ ಅಡ್ವಾಣಿಯವರ ರಥಯಾತ್ರೆಯಲ್ಲಿ ಭಾಗವಹಿಸಿದ ಕ್ಷಣ ನನಗೆ ಸಾರ್ಥಕ ಎನಿಸಿದೆ. ಅಂದಿನ ರಥಯಾತ್ರೆಯ ಹುಬ್ಬಳ್ಳಿ ಕಾರ್ಯಕ್ರಮದ ನೇತೃತ್ವವನ್ನು ನಾನೇ ವಹಿಸಿಕೊಂಡಿದ್ದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Minister Jagadeesh Shetter Statement
ಸಚಿವ ಜಗದೀಶ್ ಶೆಟ್ಟರ್

By

Published : Aug 4, 2020, 4:45 PM IST

ಹುಬ್ಬಳ್ಳಿ:ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ ನಮ್ಮೆಲ್ಲರ ಕನಸಾಗಿತ್ತು. ಅದು ಸಾಕಾರಗೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದ ನ್ಯೂ ಕಾಟನ್ ಮಾರ್ಕೆಟ್​ ರಸ್ತೆಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ ದೇಶದ ಜನರ ಕನಸಾಗಿತ್ತು. ನಾಳೆಯ ದಿನ ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಗಿದೆ. ಲಾಲ್​ ಕೃಷ್ಣ ಅಡ್ವಾಣಿಯವರ ರಥಯಾತ್ರೆಯಲ್ಲಿ ಭಾಗವಹಿಸಿದ ಕ್ಷಣ ನನಗೆ ಸಾರ್ಥಕ ಎನಿಸಿದೆ. ಅಂದಿನ ರಥಯಾತ್ರೆಯ ಹುಬ್ಬಳ್ಳಿ ಕಾರ್ಯಕ್ರಮದ ನೇತೃತ್ವವನ್ನು ನಾನೇ ವಹಿಸಿಕೊಂಡಿದ್ದೆ ಎಂದರು.

ಸಚಿವ ಜಗದೀಶ್ ಶೆಟ್ಟರ್

ಆಗ ತಾನೇ ನಾನು ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದೆ. ಅಡ್ವಾಣಿಯವರ ರಥಯಾತ್ರೆ ನನ್ನ ಜೀವನದಲ್ಲಿ ಮರೆಯಗಲಾದ ಕ್ಷಣ. ರಾಮ ಮಂದಿರ ನಿರ್ಮಾಣಕ್ಕೆ ಅಡ್ವಾಣಿಯವರ ಕೊಡುಗೆ ಅಪಾರವಿದೆ. ಮಂದಿರ ನಿರ್ಮಾಣದ ವಿಚಾರದಲ್ಲಿ ಕೆಲ ರಾಜಕೀಯ ಪಕ್ಷಗಳು ಸಂಘರ್ಷ ಮಾಡಿದ್ದವು. ಆದ್ರೆ ನಾವು ಅಂದು ಮಂದಿರ ನಿರ್ಮಾಣ ಮಾಡುತ್ತೇವೆಂದು ಹೇಳಿದ್ದೆವು. ಅದನ್ನು ಮಾಡಿ ತೋರಿಸಿದ್ದೇವೆ ಎಂದು ಹೇಳಿದರು.

ಸಿಎಂ ಬಿಎಸ್​ವೈಗೆ ಕೊರೊನಾ ತಗುಲಿರುವ ಬಗ್ಗೆ ಪ್ರತಿಕ್ರಿಯಿಸಿ, ಸಿಎಂ ಆಸ್ಪತ್ರೆಗೆ ದಾಖಲಾಗಿದ್ದರೂ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಮುಖ್ಯ ಕಾರ್ಯದರ್ಶಿ ಎಲ್ಲಾ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ವೆಂಟಿಲೇಟರ್, ಐಸಿಯು ಸಮಸ್ಯೆ ಆಗುತ್ತಿರುವ ಬಗ್ಗೆ ಇಂದು ಸಭೆ ಕರೆದಿರುವೆ. ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಹೊಸದಾಗಿ 30 ವೆಂಟಿಲೇಟರ್ ಬಂದಿದೆ. ವೆಂಟಿಲೇಟರ್ ಸಮಸ್ಯೆ ಇಲ್ಲ, ಐಸಿಯುಗಳ ಸಮಸ್ಯೆ ಇದೆ. ಆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದರು.

ABOUT THE AUTHOR

...view details