ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಸಿಡಿ ಹಾಗೂ ಆಡಿಯೋ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕುತ್ತಲೇ ಬಂದಿದೆ. ಈಗ ಸಿಡಿ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಾಂಬ್ ಸಿಡಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಜೊತೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ನಿನ್ನೆ ತಾನೇ ಸಿಡಿ ಬಾಂಬ್ ಸಿಡಿಸಿದ ಜಾರಕಿಹೊಳಿ ಹುಬ್ಬಳ್ಳಿಯಲ್ಲಿ ಪ್ರತ್ಯಕ್ಷವಾಗಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಿಎಂ ಜೊತೆಗೆ ಆಗಮಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸಾಕಷ್ಟು ಕುತೂಹಲಕ್ಕೆ ಕಾರಣರಾಗಿದ್ದಾರೆ. ಇನ್ನು, ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸಿಡಿ ಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿಯವರ ಸುತ್ತ ರಾಜ್ಯದ ದೃಷ್ಟಿ ನೆಟ್ಟಿದೆ.
ಕಾನೂನಾತ್ಮಕ ಹೋರಾಟದ ನಂತರವೇ ಮಹದಾಯಿ ಬಗ್ಗೆ ಸುಪ್ರೀಂ ಆದೇಶಿಸಿದೆ: ಮಹದಾಯಿ ಯೋಜನೆ ಅನುಷ್ಠಾನ ವಿಚಾರವಾಗಿ ಗೋವಾ ಸರ್ಕಾರದ ನಡೆಯ ಬಗ್ಗೆ ನಮಗೆ ಗೊತ್ತಿಲ್ಲ. ಈಗಾಗಲೇ ಕಾನೂನಾತ್ಮಕ ಹೋರಾಟವಾಗಿ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಟ್ರಿಮಿನಲ್ ರಚನೆಯಾಗಿ ಅದರ ಪರಿಶೀಲನೆ ಸಹ ಆಗಿದೆ. ಅಲ್ಲದೇ ತೀರ್ಪು ಕೂಡಾ ನೀಡಿದೆ. ಮಹದಾಯಿ ಯೋಜನೆ ಅನುಷ್ಠಾನವನ್ನು ಕೇಂದ್ರ ಸರ್ಕಾರ 2016ರಲ್ಲಿ ಡಿಪಿಆರ್ ನೀಡಲಾಗಿತ್ತು. ಸದ್ಯ ಡಿಪಿಆರ್ ಸಹ ಅನುಮತಿ ನೀಡಿದೆ. ಕಾನೂನು ಹೋರಾಟವಾಗಿಯೇ ಇದೆಲ್ಲ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ :ಭಾರತದ ಅಧ್ಯಕ್ಷತೆಯಲ್ಲಿ ಮೊದಲ ಬಾರಿಗೆ ಜಿ20 ಎನರ್ಜಿ ಟ್ರಾನ್ಸಿಶನ್ ವರ್ಕಿಂಗ್ ಗ್ರೂಪ್ ಸಭೆ
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಹದಾಯಿಯ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ನಿಲುವನ್ನು ವ್ಯಕ್ತಪಡಿಸಿದೆ. ಅಲ್ಲದೇ ಈಗಾಗಲೇ ಕಾನೂನಾತ್ಮಕ ಹೋರಾಟದ ರೂಪುರೇಷೆಗಳನ್ನು ಪರಿಶೀಲನೆ ಮಾಡಿಯೇ ನಿರ್ಧಾರವನ್ನು ಕೊಟ್ಟಿದೆ ಎಂದು ಹೇಳಿದರು.