ಕರ್ನಾಟಕ

karnataka

ETV Bharat / state

ಕುತೂಹಲ ಮೂಡಿಸಿದ ಜೋಶಿ, ಶೆಟ್ಟರ್, ಜಾರಕಿಹೊಳಿ ಭೇಟಿ: ಚರ್ಚೆಗೆ ಗ್ರಾಸವಾದ ಮಾತುಕತೆ - ಕೇಂದ್ರ ಸಚಿವರ ಹುಟ್ಟುಹಬ್ಬ

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ.

Ramesh Jarakiholi meets Pralhad Joshi and Jagdish Shettar
ಪ್ರಹ್ಲಾದ್​ ಜೋಶಿ ಮತ್ತು ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

By

Published : Nov 28, 2022, 2:38 PM IST

ಹುಬ್ಬಳ್ಳಿ:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಹುಟ್ಟುಹಬ್ಬದ ನೆಪದಲ್ಲಿ ಭಾನುವಾರ ರಾತ್ರಿ ಕೇಂದ್ರ ಸಚಿವರನ್ನು ಭೇಟಿಯಾಗಿರುವ ಪೋಟೋಗಳು ಈಟಿವಿ ಭಾರತಕ್ಕೆ ಲಭ್ಯವಾಗಿವೆ.

ಪ್ರಹ್ಲಾದ್​ ಜೋಶಿ ಮತ್ತು ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಭಾನುವಾರ ರಾತ್ರಿ ಜೋಶಿ ನಿವಾಸಕ್ಕೆ ಆಗಮಿಸಿದ ಜಾರಕಿಹೊಳಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರ ಜೊತೆ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೇಲ್ನೋಟಕ್ಕೆ ಕೇಂದ್ರ ಸಚಿವರ ಹುಟ್ಟುಹಬ್ಬಕ್ಕೆ ಶುಭ ಕೋರಲು ಬಂದರೂ ಸಚಿವ ಸಂಪುಟ ವಿಸ್ತರಣೆ ಆಗುತ್ತಿದ್ದು ಉಭಯ ನಾಯಕರ ಭೇಟಿ ಚರ್ಚೆ ಹುಟ್ಟು ಹಾಕಿದೆ.

ಪ್ರಹ್ಲಾದ್​ ಜೋಶಿ ಮತ್ತು ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಇದನ್ನೂ ಓದಿ: ಗಡಿ ವಿವಾದ ಮುಗಿದು ಹೋದ ಅಧ್ಯಾಯ: ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ

ABOUT THE AUTHOR

...view details