ಕರ್ನಾಟಕ

karnataka

ETV Bharat / state

ನೂತನ ಸಂಪುಟ ರಚನೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ - ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್

ಸಂಪುಟ ರಚನೆಯ ಬೆನ್ನಲ್ಲೇ ಕೆಲ ಶಾಸಕರು ಸೇರಿದಂತೆ ಸಚಿವರೂ ಸಹ ಅಸಮಾಧಾನ ಹೊರಹಾಕಿದ್ದಾರೆ. ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿ ಎನ್ನಲಾಗಿದ್ದ ರಮೇಶ್ ಜಾರಕಿಹೊಳಿ ಅವರು ಮಾಜಿ ಸಚಿವ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

Ramesh Jarkiholi visits Former minister Jagadish shettar house
ಮಾಜಿ ಸಚಿವ ಜಗದೀಶ್ ಶೆಟ್ಟರ್ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ

By

Published : Aug 8, 2021, 12:34 PM IST

ಹುಬ್ಬಳ್ಳಿ : ನೂತನ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದರು. ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಭೇಟಿ ನೀಡಿದ್ದರು.

ಶೆಟ್ಟರ್ ನಿವಾಸದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗ್ತಿದೆ.

ಅಲ್ಲದೇ ಸಚಿವ ಸ್ಥಾನದ ಕುರಿತು ಮಾತನಾಡಿದ್ದಾರೆಂದು ಹೇಳಲಾಗಿದ್ದು, ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸದ್ಯ ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಪ್ರಯತ್ನ ಮಾಡುತ್ತೇನೆ : ಸುನೀಲ್ ಕುಮಾರ್

ABOUT THE AUTHOR

...view details