ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಭೇಟಿ ನೀಡಿದರು.
ಪಶ್ಚಿಮ ಪದವೀಧರ ಕ್ಷೇತ್ರ ಕೃಷಿ ವಿವಿ ಮತ ಎಣಿಕೆ ಕೇಂದ್ರಕ್ಕೆ ಪ್ರಾದೇಶಿಕ ಆಯುಕ್ತರ ಭೇಟಿ - ಕೇಂದ್ರಕ್ಕೆ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಭೇಟಿ
ಪಶ್ಚಿಮ ಪದವೀಧರ ಕ್ಷೇತ್ರ ಕೃಷಿ ವಿವಿ ಮತ ಎಣಿಕೆ ಕೇಂದ್ರಕ್ಕೆ ಪ್ರಾದೇಶಿಕ ಆಯುಕ್ತರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮತಪೆಟ್ಟಿಗೆಗಳ ಭದ್ರತಾ ಕೊಠಡಿ, ಎಣಿಕೆ ಕೊಠಡಿ, ಅಭ್ಯರ್ಥಿಗಳು ಏಜೆಂಟರ್ಗಳ ಪ್ರವೇಶ , ಕೋವಿಡ್ ತಪಾಸಣೆ ಕೊಠಡಿ, ಮಾಧ್ಯಮ ಕೊಠಡಿಗಳ ಸ್ಥಾಪನೆಗೆ ಸ್ಥಳಗಳನ್ನು ಪರಿಶೀಲಿಸಿದರು.
ಈ ವೇಳೆ, ಜಿಲ್ಲಾಧಿಕಾರಿ ನಿತೇಸ್ .ಕೆ. ಪಾಟೀಲ, ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಅಪರ ಪ್ರಾದೇಶಿಕ ಆಯುಕ್ತರಾದ ರಮೇಶ್ ಕಳಸದ,ನಜ್ಮಾ ಪೀರಜಾದೆ, ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಡಿವೈಎಸ್ ಪಿ ರವಿ ನಾಯಕ, ಸಹಾಯಕ ಪೊಲೀಸ್ ಆಯುಕ್ತೆ ಅನುಷಾ, ಲೋಕೋಪಯೋಗಿ ಇಲಾಖೆ ಎಇಇ ವಿ.ಎನ್.ಪಾಟೀಲ, ಗದಗಕರ್, ತಹಶೀಲ್ದಾರ್ ಡಾ.ಸಂತೋಷ್ ಬಿರಾದಾರ, ಶಶಿಧರ ಮಾಡ್ಯಾಳ, ಪ್ರವೀಣ ಹುಚ್ಚಣ್ಣವರ, ಹೆಚ್.ಎನ್.ಬಡಿಗೇರ, ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಯಲಿಗಾರ ಮತ್ತಿತರರು ಇದ್ದರು.