ಕರ್ನಾಟಕ

karnataka

By

Published : Aug 13, 2019, 1:52 PM IST

ETV Bharat / state

ಮಳೆ ಎಫೆಕ್ಟ್​: ಜನಪ್ರತಿನಿಧಿ, ಅಧಿಕಾರಿಗಳ ವಿರುದ್ಧ ಹರಿಹಾಯ್ದ ಮಹಿಳೆಯರು

ಉತ್ತರ ಕರ್ನಾಟಕದಲ್ಲಿ ಮಳೆಯ ನಂತರ, ಆಗಿರುವ ನಷ್ಟ ಮತ್ತು ಸಂತ್ರಸ್ತರ ಕಷ್ಟಗಳನ್ನು ಕೇಳಲು ಯಾವುದೇ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬಂದು ಸ್ಪಂದಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

representatives-who-are-not-responsive-for-refugees

ಹುಬ್ಬಳ್ಳಿ:ಒಂದು ವಾರ ನಿರಂತರವಾಗಿ ಸುರಿದ ಭಾರಿ ಮಳೆಗೆ ನಗರದ ಜನರು ತತ್ತರಿಸಿದ್ದಾರೆ. ಹಲವು ಮನೆಗಳು ನೆಲಕಚ್ಚಿವೆ. ಆದ್ರೆ ಇಲ್ಲಿನ ಅಧಿಕಾರಿಗಳು ಮಾತ್ರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ದೋಬಿಘಾಟ್​ನ ನಿವಾಸಿಗಳು ಕಿಡಕಾರಿದ್ದಾರೆ.

ದೋಬಿಘಾಟ್​ನ ನಿವಾಸಿಗಳಿಂದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಮನೆ ಮತ್ತು ಮನೆಗಳಲ್ಲಿನ ವಸ್ತುಗಳನ್ನು ಕಳೆದುಕೊಂಡು ಕಂಗಾಲಾಗಿರುವ ಜನರ ನಿತ್ಯದ ಬದುಕು ದುಸ್ತರವಾಗಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಈವರೆಗೆ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬಂದು ಸ್ಪಂದಿಸುವ ಕೆಲಸ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ವೋಟು ಬೇಕಾದಾಗ ಓಡೋಡಿ ಬರುವ ಜನಪ್ರತಿನಿಧಿಗಳು ಜನರ ಸಂಕಷ್ಟಗಳನ್ನು ಕೇಳಲು ಹಿಂದೇಟು ಹಾಕುತ್ತಾರೆ ಎಂದು ಸಂತ್ರಸ್ತರು ಸಿಡಿಮಿಡಿಗೊಂಡಿದ್ದಾರೆ.

ಅಧಿಕಾರಿಗಳಿಗೆ ಸಮಸ್ಯೆ ತಿಳಿಸಿದ್ರೆ ಕೇವಲ ಭರವಸೆ ನೀಡುತ್ತಾರೆಯೇ ಹೊರತು ಕೆಲಸ ಮಾಡುತ್ತಿಲ್ಲ. ಇನ್ನಾದರೂ ಪೊಳ್ಳು ಭರವಸೆಗಳನ್ನು ನೀಡದೇ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ.

ABOUT THE AUTHOR

...view details