ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ; ಚಿಕ್ಕೋಡಿಯಲ್ಲಿ ಧ್ವಜಾರೋಹಣ ವೇಳೆ ಎಸಿ ಎಡವಟ್ಟು - etv bharat kannada

ಹುಬ್ಬಳ್ಳಿಯ ಈದ್ಗಾ ಮೈದಾನ, ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣ ಸೇರಿದಂತೆ ಹಲವೆಡೆ ಸಂಭ್ರಮದ ಗಣರಾಜ್ಯೋತ್ಸವ ನಡೆಯಿತು.

dharwad
ಹುಬ್ಬಳ್ಳಿ-ಧಾರವಾಡದ ಹಲವೆಡೆ ಧ್ವಜಾರೋಹಣ

By

Published : Jan 26, 2023, 1:36 PM IST

ಹುಬ್ಬಳ್ಳಿ/ಧಾರವಾಡ:ಇಂದು74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡಲಾಯಿತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಅವರು ಧ್ಬಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರು, ಪಾಲಿಕೆ ಅಧಿಕಾರಿಗಳು ಭಾಗಿಯಾಗಿದ್ದರು.

ಧ್ವಜಾರೋಹಣದ ಬಳಿಕ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಆಯುಕ್ತ ಗೋಪಾಲಕೃಷ್ಣ ಮಾಲಾರ್ಪಣೆ ಮಾಡಿದರು. ತಾಲೂಕು ಆಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲೂ ಧ್ವಜಾರೋಹಣ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಗ್ರಾಮೀಣ ತಹಶೀಲ್ದಾರ್​ ಪ್ರಕಾಸ ನಾಶಿ ಅವರು ಧ್ಜಜಾರೋಹಣ ನೆರವೇರಿಸಿಕೊಟ್ಟರು. ಇದಲ್ಲದೆ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಪಾಲಿಕೆ ಆಯುಕ್ತ ಈರೇಶ ಅಂಚಟಗೇರಿ ದ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸರು ಮತ್ತು ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.

ಧಾರವಾಡದಲ್ಲಿ ಸಂಭ್ರಮದ ಗಣರಾಜ್ಯೋತ್ಸವ:ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಇಂದು ಸಂಭ್ರಮದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ಅವರು ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್​ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಇದನ್ನೂ ಓದಿ:ದೆಹಲಿ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಗಮನಸೆಳೆದ 'ಕರ್ನಾಟಕದ ನಾರಿಶಕ್ತಿ'- ವಿಡಿಯೋ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತ ರಮಣ್ ಗುಪ್ತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಜಿ.ಪಂ ಸಿಇಓ ಡಾ.ಸುರೇಶ ಇಟ್ನಾಳ ಪಾಲ್ಗೊಂಡಿದ್ದರು. ನಂತರ ಸಚಿವರು ವಿವಿಧ ಪೊಲೀಸ್ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ಅಲ್ಲದೇ ಪೊಲೀಸರಿಂದ ಆಕರ್ಷಕ ಕವಾಯತ್ ಕೂಡ ನಡೆಯಿತು. ಇನ್ನು ಧ್ವಜಾರೋಹಣ ಕಾರ್ಯಕ್ರಮಕ್ಕೆ ಶಾಸಕ ಅಮೃತ ದೇಸಾಯಿ, ಅರವಿಂದ ಬೆಲ್ಲದ ಸೇರಿದಂತೆ ಪ್ರಮುಖರು ಗೈರಾಗಿದ್ದರು.

ಬೆಳಗಾವಿಯಲ್ಲಿ ಕಾರಜೋಳರಿಂದ ಧ್ವಜಾರೋಹಣ:ಕುಂದಾನಗರಿ ಬೆಳಗಾವಿಯ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಆಯುಕ್ತ ಮಹಾಂತೇಶ್ ಹಿರೇಮಠ, ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಸಿಇಒ ದರ್ಶನ ಎಚ್.ವಿ, ನಗರ ಪೋಲಿಸ್ ಕಮೀಶನರ್ ಡಾ.ಬೋರಲಿಂಗಯ್ಯ, ಎಸ್ ಪಿ. ಸಂಜೀವ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಚಿಕ್ಕೋಡಿ- ಧ್ವಜಾರೋಹಣದ ವೇಳೆ ಎಸಿ ಎಡವಟ್ಟು:ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಉಪವಿಭಾಗಾಧಿಕಾರಿ ಮಾಧವ ಗಿತ್ತೆ ಧ್ವಜಾರೋಹಣ ನೆರವೇರಿಸಿದರು. ಎಸಿ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದಲ್ಲದೆ, ಶೂ ಹಾಕಿಕೊಂಡೇ ಧ್ವಜಾರೋಹಣ ನೆರವೇರಿಸಿದರು. ಬಳಿಕ ಡಾ.ಬಾಬಾಸಾಹೇಬ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಶೂ ಹಾಕಿಕೊಂಡೇ ಪೂಜೆ ಸಲ್ಲಿಸಲು ಮುಂದಾಗಿದ್ದರು. ಈ ವೇಳೆ ಕಚೇರಿ ಸಿಬ್ಬಂದಿ ಎಚ್ಚರಿಸುತ್ತಿದ್ದಂತೆ ಭಾವಚಿತ್ರದ ಮುಂದೆಯೇ ಶೂ ಕಳಚಿಟ್ಟು ಗೌರವ ಸಲ್ಲಿಸಿದರು. ಉಪವಿಭಾಗಾಧಿಕಾರಿ ನಡೆಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:ಪ್ರಪ್ರಥಮ ಬಾರಿಗೆ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

ABOUT THE AUTHOR

...view details