ಹುಬ್ಬಳ್ಳಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳ ಶಿಕ್ಷಕರು ಕೋವಿಡ್ನಿಂದಾಗಿ ಸಂಬಳವಿಲ್ಲದೇ ಸಂಕಷ್ಟದಲ್ಲಿದ್ದು, ಕೂಡಲೇ ಸರ್ಕಾರ ಕೋವಿಡ್ ವಿಶೇಷ ಪ್ಯಾಕೇಜ್ ಜೊತೆಗೆ ಉದ್ಯೋಗ ಭದ್ರತೆ ನೀಡಲು ಆಗ್ರಹಿಸಿ ಅತಿಥಿ ಶಿಕ್ಷಕರ ಹೋರಾಟ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ಅತಿಥಿ ಶಿಕ್ಷಕರಿಗೆ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ - Hubli
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳ ಶಿಕ್ಷಕರು ಕೋವಿಡ್ನಿಂದಾಗಿ ಸಂಬಳವಿಲ್ಲದೇ ಸಂಕಷ್ಟದಲ್ಲಿದ್ದು, ಕೂಡಲೇ ಸರ್ಕಾರ ಕೋವಿಡ್ ವಿಶೇಷ ಪ್ಯಾಕೇಜ್ ನೀಡಲು ಆಗ್ರಹಿಸಿ ಅತಿಥಿ ಶಿಕ್ಷಕರ ಹೋರಾಟ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅವರು, ಶಿಕ್ಷಕರ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಿ ಮತ್ತು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದರು. ಇನ್ನು ಶಿಕ್ಷಕರೇ ತಮ್ಮ ಕೈಯಿಂದಲೇ ಖರ್ಚು ಭರಿಸುತ್ತ ಆನ್ಲೈನ್ ತರಗತಿಗಳನ್ನು ಕೂಡ ನಿಭಾಯಿಸುತ್ತಿದ್ದಾರೆ. ಕೋವಿಡ್-19ನಿಂದಾಗಿ ಲಾಕ್ಡೌನ್ ಬಂದು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಆಗಿದ್ದು, ಇವತ್ತಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ನೀಡುತ್ತಿರುವ ಸಂಬಳ ಸಾಕಾಗುವುದಿಲ್ಲ ಎಂದು ಆಗ್ರಹಿಸಿದರು.
ಹಿಂದಿನಿಂದಲೂ ಸರ್ಕಾರಗಳು ವೇತನದಲ್ಲಿ ತಾರತಮ್ಯ ಮಾಡುತ್ತ ಬಂದಿವೆ. ದುಡಿಯುತ್ತಿರುವ ಅತಿಥಿ ಶಿಕ್ಷಕರಿಗೆ ಇಲ್ಲಿಯವರೆಗೆ ಸಂಬಳ ನೀಡಿಲ್ಲ. ಆದ್ದರಿಂದ ಕೂಡಲೇ ಸರ್ಕಾರ ಸಂಬಳ ನೀಡುವುದರ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಬೇಕು ಎಂದು ತಹಶೀಲ್ದಾರರ ಮುಖಾಂತರ ಮನವಿ ಮಾಡಿದರು.