ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡುವಂತೆ ಕೋರಿ ಎಐಎಂಐಎಂ ಪಕ್ಷದ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದರು.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಮುತಾಲಿಕ್ ವಿರೋಧ - ಹುಬ್ಬಳ್ಳಿ ಪಾಲಿಕೆ
ಟಿಪ್ಪು ಜಯಂತಿ ಆಚರಣೆ ಅವಕಾಶ ಕೊಡಿ ಎಂದು ಹುಬ್ಬಳ್ಳಿ ಪಾಲಿಕೆ ಆಯುಕ್ತರಿಗೆ ಎಐಎಂಐಎಂ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಈ ಬಗ್ಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.
![ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಮುತಾಲಿಕ್ ವಿರೋಧ Sri Ram Sena chief Pramod Muthalik](https://etvbharatimages.akamaized.net/etvbharat/prod-images/768-512-16851181-thumbnail-3x2-bin.jpg)
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ಟಿಪ್ಪು ಜಯಂತಿಗೆ ಮಹಾನಗರ ಪಾಲಿಕೆ ಅವಕಾಶ ಕೊಡಬಾರದು. ಟಿಪ್ಪು ಓರ್ವ ದೇಶದ್ರೋಹಿ, ಮತಾಂಧ, ಕನ್ನಡ ವಿರೋಧಿ. ಹಲವಾರು ದೇವಸ್ಥಾನ ಕೆಡವಿದ ವ್ಯಕ್ತಿ. ಲಕ್ಷಾಂತರ ಹಿಂದೂಗಳನ್ನು ಮತಾಂತರ ಮಾಡಿದ್ದಾನೆ. ಅಂಥವನ ಆಚರಣೆಗೆ ಇಲ್ಲಿ ಅವಕಾಶ ಕೊಡಬಾರದು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಈದ್ಗಾ ಮೈದಾನದಲ್ಲಿ ಗಣೇಶನ ವಿರೋಧಿಸಿದವರಿಗೆ ಶಾಪ ತಟ್ಟುತ್ತೆ: ಪ್ರಮೋದ್ ಮುತಾಲಿಕ್