ಹುಬ್ಬಳ್ಳಿ: ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಿರುವ ಶೇ.10ರಷ್ಟು ಮೀಸಲಾತಿ ಸೌಲಭ್ಯ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸಿಗುವಂತೆ ರಾಜ್ಯ ಸರ್ಕಾರ ಕೂಡಲೇ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಸಿಎಂಗೆ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಸದಸ್ಯ ಎಂ.ಬಿ.ನಾತು ಒತ್ತಾಯಿಸಿದರು.
ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಮೀಸಲಾತಿಗೆ ಒತ್ತಾಯ - Reservation insistence on poor students
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಮೀಸಲಾತಿ ಸೌಲಭ್ಯ ಸಿಗುವಂತೆ ಸಿಎಂ ಕೂಡಲೇ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಸದಸ್ಯ ಎಂ.ಬಿ.ನಾತು ಒತ್ತಾಯಿಸಿದರು.
ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಸದಸ್ಯ ಎಂ.ಬಿ.ನಾತು
ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೂ ಶೇ.10 ಮೀಸಲಾತಿ ನೀಡಿದೆ. ಇದು ರಾಜ್ಯದಲ್ಲಿನ ಬ್ರಾಹ್ಮಣ, ಆರ್ಯ, ವೈಶ್ಯ ಮತ್ತಿತರ ಸಮುದಾಯಗಳಿಗೆ ಸಿಗುವಂತಾಗಲು ಕೂಡಲೇ ಸಂಪುಟ ಸಭೆಯಲ್ಲಿ ಚರ್ಚಿಸಿ, ಸುಗ್ರೀವಾಜ್ಞೆ ಮೂಲಕ ಅವಕಾಶ ಕಲ್ಪಿಸಬೇಕು ಎಂದರು.
ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಮನವಿಗೆ ಸ್ಪಂದಿಸಿ, ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.