ಹುಬ್ಬಳ್ಳಿ: ಕೊಲೆ, ದರೋಡೆ, ಸುಲಿಗೆ, ಕಳ್ಳತನ, ಅತ್ಯಾಚಾರ ಮತ್ತಿತರ ಪ್ರಕರಣಗಳ ಶೀಘ್ರ ಪತ್ತೆಗಾಗಿ ಹುಬ್ಬಳ್ಳಿಯಲ್ಲಿ ವಿಧಿ ವಿಜ್ಞಾನ ಲ್ಯಾಬ್ ಆರಂಭವಾಗಲಿದೆ. ಅಂದಾಜು 15 ಕೋಟಿ ರೂಪಾಯಿ ವೆಚ್ಚದಲ್ಲಿ ಕೇಂದ್ರ ನಿರ್ಮಾಣ ಮಾಡಲಾಗುತ್ತಿದ್ದು, ಅಪರಾಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಹಕಾರಿಯಾಗಲಿದೆ.
ಕ್ರಿಮಿನಲ್ ಪ್ರಕರಣ ಶೀಘ್ರ ಪತ್ತೆಗೆ ಹುಬ್ಬಳ್ಳಿಯಲ್ಲಿ ತಲೆ ಎತ್ತಲಿದೆ ಆರ್‌ಎಫ್‌ಎಸ್‌ಎಲ್ ಕೇಂದ್ರ - Hubli latest news
ಹುಬ್ಬಳ್ಳಿಯಲ್ಲಿ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ (ಆರ್‌ಎಫ್‌ಎಸ್‌ಎಲ್) ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. 15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಅಪರಾಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಹಕಾರಿಯಾಗಲಿದೆ.

ಉತ್ತರ ಕರ್ನಾಟಕದಲ್ಲಿ ಈಗಾಗಲೇ ಬೆಳಗಾವಿ, ಕಲಬುರಗಿಯಲ್ಲಿ ಆರ್‌ಎಫ್‌ಎಸ್‌ಎಲ್ ಕೇಂದ್ರಗಳಿವೆ. ಹುಬ್ಬಳ್ಳಿಯಲ್ಲಿ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ (ಆರ್‌ಎಫ್‌ಎಸ್‌ಎಲ್) ಪ್ರಾರಂಭಿಸಲು ರಾಜ್ಯಸರ್ಕಾರ ಮುಂದಾಗಿದ್ದು, ಇದು ಮೂರನೇ ಕೇಂದ್ರವಾಗಲಿದೆ.
ಕೊಲೆ, ದರೋಡೆ, ಸುಲಿಗೆ, ಕಳ್ಳತನ, ಅತ್ಯಾಚಾರ ಮತ್ತಿತರ ಪ್ರಕರಣಗಳ ಸಂದರ್ಭದಲ್ಲಿ ಪೊಲೀಸರು ವಿಶೇಷ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಾರೆ. ಈ ಸಾಕ್ಷ್ಯಗಳ ಖಚಿತತೆಗಾಗಿ ಪರೀಕ್ಷೆಗೆ ಒಳಪಡಿಸಲು ಎಫ್‌ಎಸ್‌ಎಲ್‌ಗೆ ಕಳುಹಿಸುತ್ತಾರೆ. ಸ್ಥಳೀಯವಾಗಿ ಆರ್‌ಎಫ್‌ಎಸ್‌ಎಲ್ ಆರಂಭವಾಗುವುದರಿಂದ ಶೀಘ್ರವೇ ವರದಿ ಕೈ ಸೇರುತ್ತದೆ. ಇದು ಪೊಲೀಸರ ತನಿಖೆಗೆ ಸಹಕಾರಿಯಾಗಲಿದೆ.