ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆ ಹುಬ್ಬಳ್ಳಿ-ಕಾರವಾರ ರಸ್ತೆಯ ಚಟ್ನಿ ಕಾಂಪ್ಲೆಕ್ಸ್ ಬಳಿ ಸಂಭವಿಸಿದ್ದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಖಾಸಗಿ ಟಿವಿ ಚಾನಲ್ ನ ಕ್ಯಾಮರಾಮನ್ ವೊಬ್ಬರು ಚಿಕಿತ್ಸೆ ಫಲಿಸದೆ ಕಿಮ್ಸ್ ನಲ್ಲಿ ತಡರಾತ್ರಿ ಮೃತಪಟ್ಟಿದ್ದಾರೆ.
ರಸ್ತೆ ಅಪಘಾತ: ಚಿಕಿತ್ಸೆ ಫಲಿಸದೇ ಖಾಸಗಿ ಟಿವಿ ಚಾನಲ್ ಕ್ಯಾಮರಾಮನ್ ಸಾವು - Death of Private TV Channel Cameraman
ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ಸುದ್ದಿ ವಾಹಿನಿಯ ಕ್ಯಾಮರಾಮನ್ವೊಬ್ಬರು ಚಿಕಿತ್ಸೆ ಫಲಿಸದೆ ಕಿಮ್ಸ್ ನಲ್ಲಿ ತಡರಾತ್ರಿ ಸಾವನ್ನಪ್ಪಿದ್ದಾರೆ.
Camera man
ಸುನೀಲ ಪಾಚಂಗಿ ಮೃತ ವ್ಯಕ್ತಿ. ಕಳೆದ ಮುರ್ನಾಲ್ಕು ವರ್ಷಗಳಿಂದ ಕ್ಯಾಮರಾಮನ್ ಆಗಿ ಕಾರ್ಯ ನಿರ್ವಾಹಿಸುತ್ತಿದ್ದರು. ಹುಬ್ಬಳ್ಳಿ-ಕಾರವಾರ ರಸ್ತೆಯ ಬಳಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸುನೀಲ ಸಾವನ್ನಪ್ಪಿದ್ದಾರೆ. ಇವರ ಅಗಲಿಕೆ ಪತ್ರಕರ್ತರಿಗೆ ಅತೀವ ನೋವುಂಟು ಮಾಡಿದೆ.