ಧಾರವಾಡ:ಕಂಪನಿಗಳಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಮಹಿಳೆ ಸೇತುವೆ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಳಿಯ ಲಾಸ್ಟ್ ಗೇಟ್ ಬಳಿ ಸಂಭವಿಸಿದೆ.
ಮೃತ ಮಹಿಳೆ ತೇಗೂರ ಗ್ರಾಮದ ನಿವಾಸಿ ಎನ್ನಲಾಗಿದೆ. ಘಟನೆಯಲ್ಲಿ ಇನ್ನು 3 ಜನರಿಗೆ ಗಾಯಗಳಾಗಿದ್ದು, ಅವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.