ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಬೈಕ್‌-ಕಾರ್ ಮಧ್ಯೆ ಅಪಘಾತ: ಸವಾರ ಸಾವು, ಕಾರು ಚಾಲಕ ಪಾರು

ಹುಬ್ಬಳ್ಳಿಯಿಂದ ನವಲಗುಂದ ಕಡೆಗೆ ಹೊರಟಿದ್ದ ಬೈಕ್ ಹಾಗೂ ನವಲಗುಂದ ಕಡೆಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.

Road Accident in Hubli
ಹುಬ್ಬಳ್ಳಿಯಲ್ಲಿ ಬೈಕ್ -ಕಾರ್ ಮಧ್ಯೆ ಅಪಘಾತ

By

Published : Apr 11, 2021, 11:58 AM IST

ಹುಬ್ಬಳ್ಳಿ: ಕಾರು ಮತ್ತು ಬೈಕ್ ಮುಖಾಮುಕಿ ಡಿಕ್ಕಿ ನಡೆದ ಪರಿಣಾಮ ಬೈಕ್ ಸವಾರನೋರ್ವ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಕುಸುಗಲ್ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ಹುಬ್ಬಳ್ಳಿಯಿಂದ ನವಲಗುಂದ ಕಡೆಗೆ ಹೊರಟಿದ್ದ ಬೈಕ್ ಹಾಗೂ ನವಲಗುಂದ ಕಡೆಯಿಂದ ಹುಬ್ಬಳ್ಳಿಗೆ ಹೊರಟಿದ್ದ ಕಾರಿನ ನಡುವೆ ಅಪಘಾತ ನಡೆದಿದೆ. ಘಟನೆ ವೇಳೆ ಒಂದೇ ಬೈಕ್‌ನಲ್ಲಿ ಮೂವರು ಸಂಚರಿಸುತ್ತಿದ್ದರು. ದುರ್ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೈಕ್‌ಗೆ ಕಾರು ಡಿಕ್ಕಿಯಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿಬ್ಬಂದಿ ಮನವೊಲಿಕೆಗೆ ಯತ್ನಿಸಿದ ಡಿಪೋ ಮ್ಯಾನೇಜರ್​ಗೆ ಕಪಾಳಮೋಕ್ಷ ​- ವಿಡಿಯೋ

ABOUT THE AUTHOR

...view details