ಹುಬ್ಬಳ್ಳಿ :ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ದರ್ಗಾದ ಬಳಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ದರ್ಗಾದ ಆಡಳಿತ ಮಂಡಳಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹಾಗಾಗಿ ಎಲ್ಲೆಡೆಯೂ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.