ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಆರ್. ದಿಲೀಪ್ ಮಾರ್ಗದರ್ಶನದಲ್ಲಿ ರೌಡಿಶೀಟರ್ಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ರೌಡಿಶೀಟರ್ಗಳ ಮನೆ ಮೇಲೆ ದಾಳಿ - ರೌಡಿಶೀಟರ್ಗಳ ಮನೆ
ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತರಾದ ಆರ್. ದಿಲೀಪ್ ಮಾರ್ಗದರ್ಶನದಲ್ಲಿ ರೌಡಿಶೀಟರ್ಗಳ ಮನೆ ಮೇಲೆ ದಾಳಿ ಮಾಡಲಾಗಿದೆ. ಒಟ್ಟು 19 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿ, ಅವರ ಮನೆಗಳ ಶೋಧ ಕಾರ್ಯಾಚರಣೆ ನಡೆಸಲಾಯಿತು.
ಪೊಲೀಸ್ ಆಯುಕ್ತ ಆರ್. ದಿಲೀಪ್
ಹು-ಧಾ ಪೊಲೀಸ್ ಆಯುಕ್ತ ಆರ್. ದಿಲೀಪ್ ಮಾರ್ಗದರ್ಶನದಲ್ಲಿ ಡಿಸಿಪಿ ಡಿ. ಎಲ್. ನಾಗೇಶ ಎಸಿಪಿ ಎಸ್.ಎಂ. ಸಂದಿಗವಾಡ ನೇತೃತ್ವದಲ್ಲಿ ಹುಬ್ಬಳ್ಳಿ ನಗರದಲ್ಲಿ ಒಟ್ಟು 19 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿ, ಅವರ ಮನೆಗಳ ಶೋಧ ಕಾರ್ಯಾಚರಣೆ ನಡೆಸಲಾಯಿತು.
ಅದೇ ರೀತಿ ಧಾರವಾಡ ನಗರದಲ್ಲಿ ಮೂವರು ರೌಡಿ ಶೀಟರ್ಗಳ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಲಾಯಿತು.ಅವಳಿನಗರದಲ್ಲಿ ಒಟ್ಟು 22 ರೌಡಿ ಶೀಟರ್ಗಳ ಮನೆ ಮೇಲೆ ದಾಳಿ ಮಾಡಿದ್ದು, ಅಹಿತಕರ ಘಟನೆಯಲ್ಲಿ ಪಾಲ್ಗೊಂಡರೇ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.