ಧಾರವಾಡ: ಪಕ್ಕದ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ನಗರದ ಹೋಟೆಲ್ಗಳಲ್ಲಿ ತಂಗುವ ಕೇರಳ ಹಾಗೂ ಮಹಾರಾಷ್ಟ್ರ ನಿವಾಸಿಗಳಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ್ದಾರೆ.
ಹೋಟೆಲ್ನಲ್ಲಿ ತಂಗುವ ಅತಿಥಿಗಳಿಗೆ ಆರ್ಟಿಪಿಸಿಆರ್ ಕಡ್ಡಾಯ: ಧಾರವಾಡ ಡಿಸಿ
ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ, ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೂ ಸಹ ಈ ಸೂಚನೆ ಅನ್ವಯವಾಗುತ್ತದೆ ಎಂದು ಹೇಳಿದರು.
ಧಾರವಾಡ ಡಿಸಿ
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್ಟಿಪಿಸಿಆರ್ ವರದಿ ತರಬೇಕು. ಟಿಕೆಟ್ ಕೊಡುವ ಮುಂಚೆಯೇ ವರದಿ ಪಡೆಯಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಮೂರನೇ ಅಲೇ ತಡೆಗಟ್ಟುವಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಮಹಾರಾಷ್ಟ್ರದಿಂದ ಬಂದ ಐದು ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸದ್ಯ ಅವರು ಹೋಮ್ ಐಸೊಲೆಷನದಲ್ಲಿ ಇದ್ದಾರೆ. ಹೀಗಾಗಿ ಹೊರ ರಾಜ್ಯದಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ವರದಿ ಕಡ್ಡಾಯ ಎಂದು ಮಾಹಿತಿ ನೀಡಿದರು.