ಕರ್ನಾಟಕ

karnataka

ETV Bharat / state

ಯಾವೊಬ್ಬ ಕುರುಬನಿಗೂ ಸಮುದಾಯದ ಬಗ್ಗೆ ಕಾಳಜಿ ಇಲ್ಲ: ರುದ್ರಣ್ಣ ಗುಳಗುಳಿ

ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕುರುಬ ಸಮುದಾಯ ಶ್ರಮಿಸಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ ಅವಕಾಶ ಕಲ್ಪಿಸಬೇಕೆಂದು ಹಾಲುಮತ ಮಹಾಸಭಾದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಹೇಳಿದ್ದಾರೆ.

Rudranna guluguli
ರುದ್ರಣ್ಣ ಗುಳಗುಳಿ

By

Published : Feb 20, 2020, 1:49 PM IST

ಹುಬ್ಬಳ್ಳಿ:ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಕುರುಬ ಸಮುದಾಯ ಸಹಕಾರ ನೀಡಿದ್ದು, ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಿಂದ ಅವಕಾಶ ಕಲ್ಪಿಸಬೇಕು ಎಂದು ಹಾಲುಮತ ಮಹಾಸಭಾದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಹಾಲುಮತ ಮಹಾಸಭಾದ ಅಧ್ಯಕ್ಷ ರುದ್ರಣ್ಣ ಗುಳಗುಳಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಅತಿ ದೊಡ್ಡ ಸಮುದಾಯಗಳಲ್ಲಿ ಕುರುಬ ಸಮುದಾಯ ‌ಒಂದಾಗಿದ್ದು, 30 ಜಿಲ್ಲೆಗಳಲ್ಲಿ ಸಮಾಜವು ವಿಸ್ತಾರವಾಗಿ ಹರಡಿಕೊಂಡಿದೆ. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕುರುಬ ಸಮುದಾಯ ಶ್ರಮಿಸಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅವರು ಹೇಳಿದರು.

ನಮ್ಮ ಅಭ್ಯರ್ಥಿಗಳಾದ ಬಸವರಾಜ ಗುರಿಕಾರ, ರವಿ ದಂಡಿನ ಮತ್ತು ಭೋಜರಾಜ ಕರುದಿ ಈ ಮೂವರಲ್ಲಿ ಯಾರಾದರೂ ಒಬ್ಬರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಕುರುಬ ಸಮುದಾಯದ ಯಾವೊಬ್ಬ ನಾಯಕರಿಗೂ ಕೂಡ ಕುರುಬ ಸಮುದಾಯದ ಬಗ್ಗೆ ಕಾಳಜಿಯೇ ಇಲ್ಲ. ಕೆ.ಎಸ್.ಈಶ್ವರಪ್ಪನವರನ್ನು ಕೇಳಿದರೇ ಅವರು ಕುರುಬರೇ ಅಲ್ಲ ಎನ್ನುವ ರೀತಿಯಲ್ಲಿ ಮಾತನಾಡುತ್ತಾರೆ ಎಂದು ಅವರು ಗಂಭೀರವಾಗಿ ಆರೋಪಿಸಿದರು.

ಅಲ್ಲದೇ ಒಂದು ವೇಳೆ‌ ಬಿಜೆಪಿ ಅವಕಾಶ ಕಲ್ಪಿಸದಿದ್ದರೇ ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ತಿಳಿಸಿದರು.

ABOUT THE AUTHOR

...view details