ಹುಬ್ಬಳ್ಳಿ: ಬಿಜೆಪಿ ಸರ್ಕಾರ ಅಧಿಕಾರ ನಡೆಸುವಲ್ಲಿ ವಿಫಲವಾಗಿದ್ದರಿಂದ ಪಾಲಿಕೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಬೆಂಬಲಿಸಿದ್ದಾರೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿಂದು ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ 33 ಸ್ಥಾನಗಳನ್ನು ಗೆಲ್ಲಿಸಿಕೊಡುವಲ್ಲಿ ಕಾರ್ಯಕರ್ತರು ಮತ್ತು ಮತದಾರರು ಸಹಕರಿಸಿದ್ದಾರೆ. ಹೀಗಾಗಿ ಮತದಾರರು ಕಾಂಗ್ರೆಸ್ ಪಕ್ಷದ ಕಡೆ ವಾಲಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತದೆ ಎಂದರು.
ಬಿಜೆಪಿಯ ದುರಾಡಳಿತದಿಂದ ಜನ ಕಾಂಗ್ರೆಸ್ ಬೆಂಬಲಿಸಿದ್ದಾರೆ: ಮಾಜಿ ಸಚಿವ ದೇಶಪಾಂಡೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ, ಅರವಿಂದ್ ಬೆಲ್ಲದ್ ಬಿಜೆಪಿಯ ಪ್ರಭಾವಿ ನಾಯಕರುಗಳು ಇದ್ದರೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದಾರೆ. ಜೊತೆಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವೇ ಅಧಿಕಾರದಲ್ಲಿದ್ದರೂ ಜನಬೆಂಬಲ ಪಡೆಯುವಲ್ಲಿ ವಿಫಲವಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ನರೇಗಾ ಯೋಜನೆಯ 959 ಕೋಟಿ ರೂ ಬಾಕಿ ಮೊತ್ತವನ್ನು ಕೇಂದ್ರ ಬಿಡುಗಡೆ ಮಾಡಿದೆ: ಈಶ್ವರಪ್ಪ