ಹುಬ್ಬಳ್ಳಿ:ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಮನೆಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಭೇಟಿ ನೀಡಿ ಸಚಿವರ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದರು.
ಇಂದು ತಮ್ಮ ಸ್ವಗೃಹಕ್ಕೆ ಆಗಮಿಸಿದ ವೃಕ್ಷಮಾತೆ ತಿಮ್ಮಕ್ಕ ಅವರಿಗೆ ಸಚಿವರು ಅದ್ದೂರಿಯಾಗಿ ಸ್ವಾಗತಿಸಿದ್ದು, ಮಾತ್ರವಲ್ಲದೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಮನವಿ ನೀಡಿದ ಸಾಲುಮರದ ತಿಮ್ಮಕ್ಕನವರು, ಪ್ರತಿನಿತ್ಯ ಅಯ್ಯಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗಾಗಿ ವಿಶೇಷ ರೈಲು ಸೇವೆ ಕಲ್ಪಿಸುವ ಕುರಿತು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.