ಕರ್ನಾಟಕ

karnataka

ETV Bharat / state

ಸರ್ಕಾರಿ ಶಾಲೆ ಅಂದ ಹೆಚ್ಚಿಸಿದ ಶ್ರೀ ಸದ್ಗುರು ಸಿದ್ಧಾರೂಢರ ಹಳೇ ವಿದ್ಯಾರ್ಥಿಗಳು - ಸರ್ಕಾರಿ ಶಾಲೆ ಅಂದ ಹೆಚ್ಚಿಸಿದ ಶ್ರೀ ಸದ್ಗುರು ಸಿದ್ಧಾರೂಢರ ಹಳೇ ವಿದ್ಯಾರ್ಥಿಗಳು

ಶ್ರೀ ಸದ್ಗುರು ಸಿದ್ಧಾರೂಢರ ಹಳೇ ವಿದ್ಯಾರ್ಥಿಗಳ ಸಂಘದಿಂದ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

Sadguru Siddharoodha old students
Sadguru Siddharoodha old students

By

Published : Jan 26, 2022, 7:23 AM IST

ಹುಬ್ಬಳ್ಳಿ: ಶಾಲೆಯಲ್ಲಿ ಕಲಿತು ವಿದ್ಯಾವಂತರಾಗಿ ಈಗ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಹಳೇ ವಿದ್ಯಾರ್ಥಿಗಳ ಗುಂಪೊಂದು ಸರ್ಕಾರಿ ಶಾಲೆಯ ಅಂದವನ್ನು ಹೆಚ್ಚಿಸಿದ್ದಾರೆ. ಶ್ರೀ ಸದ್ಗುರು ಸಿದ್ಧಾರೂಢರ ಹಳೇ ವಿದ್ಯಾರ್ಥಿಗಳ ಸಂಘದಿಂದ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಶಾಲೆಯ ಗೋಡೆಗಳಿಗೆ ಬಣ್ಣ ಹಚ್ಚುವ ಮೂಲಕ ಜಾಗೃತಿ ಮೂಡಿಸಿದರು.

ಸರ್ಕಾರಿ ಶಾಲೆ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು

ಶ್ರೀ ಸದ್ಗುರು ಸಿದ್ಧಾರೂಢರ ಹಳೇ ವಿದ್ಯಾರ್ಥಿಗಳ‌ ಸಂಘವು ನಿರಂತರವಾಗಿ ನಗರದಲ್ಲಿ ಸ್ವಚ್ಛತಾ ಅಭಿಯಾನದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಸರ್ಕಾರಿ ಶಾಲೆ ಸೇರಿದಂತೆ ರುದ್ರಭೂಮಿಗಳಿಗೂ ಸಹ ಭೇಟಿ ನೀಡಿ, ಸ್ವಚ್ಛತೆಯ ಕುರಿತು ಅರಿವು ಮೂಡಿಸಿದ್ದಾರೆ. ಇವರ ಕಾರ್ಯಕ್ಕೆ ಸಾರ್ವಜನಿಕರು ಸಹ ಸಾಥ್​​ ನೀಡಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details