ಹುಬ್ಬಳ್ಳಿ: ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರದ ಆದೇಶದ ಮೇರೆಗೆ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ 226ನೇ ಜಯಂತಿ ಉತ್ಸವ ಕಾರ್ಯಕ್ರಮ ಹಾಗೂ ರಾಯಣ್ಣನ ಭಾವಚಿತ್ರ ಮೆರವಣಿಗೆ ರದ್ದು ಮಾಡಲಾಗಿದೆ ಎಂದು ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಅಧ್ಯಕ್ಷ ಶಿವಾನಂದ ಮುತ್ತಣ್ಣವರ ತಿಳಿಸಿದರು.
ಕೊರೊನಾ ಎಫೆಕ್ಟ್: ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ ರದ್ದು - Hubli Sangolli Rayanna 226th Jayanti News
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ 226ನೇ ಜಯಂತಿ ಉತ್ಸವ ಕಾರ್ಯಕ್ರಮವನ್ನು ಈ ಬಾರಿ ರದ್ದುಗೊಳಿಸಲಾಗಿದೆ ಎಂದು ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಅಧ್ಯಕ್ಷ ಶಿವಾನಂದ ಮುತ್ತಣ್ಣವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ 226 ನೇ ಜಯಂತಿ ಆಚರಣೆ ರದ್ದು
ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ ರದ್ದು
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 15ರಂದು ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣರ ಜಯಂತಿಯನ್ನು ಪ್ರತಿ ವರ್ಷ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮ ನಡೆಸಲು ಸಾಧ್ಯವಾಗದ ಕಾರಣ ಕಾರ್ಯಕ್ರಮ ರದ್ದು ಮಾಡಲಾಗಿದೆ. ಆದ್ದರಿಂದ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ನಾಳೆ ತಾಲೂಕಿನ ಮಾರಡಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣಗೊಳ್ಳಲಿದ್ದು, ಮುಖ್ಯ ಅತಿಥಿಯಾಗಿ ಶಾಸಕ ಅಮೃತ ದೇಸಾಯಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.