ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಶಾಲೆ ಆರಂಭಕ್ಕೂ ಮುನ್ನ ಸಿದ್ದವಾದ ಶಾಲಾ‌ ಶಿಕ್ಷಕರು - ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆ

ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಗೆ ಶಿಕ್ಷಕರು ಹಾಜರಾಗಿದ್ದು, ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಶಿಕ್ಷಕರೊಂದಿಗೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.

Hubli
ಹುಬ್ಬಳ್ಳಿಯಲ್ಲಿ ಶಾಲೆ ಆರಂಭಕ್ಕೂ ಮುನ್ನ ಸಿದ್ದವಾದ ಶಾಲಾ‌ ಶಿಕ್ಷಕರು

By

Published : Nov 2, 2020, 7:54 PM IST

ಹುಬ್ಬಳ್ಳಿ:ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲಾ ಕಾಲೇಜುಗಳಿಗೆ ನವೆಂಬರ್-2 ರಿಂದ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿಂದು ಶಾಲೆಗಳತ್ತ ಶಿಕ್ಷಕರು ಮುಖ ಮಾಡಿದರು.

ಹುಬ್ಬಳ್ಳಿಯಲ್ಲಿ ಶಾಲೆ ಆರಂಭಕ್ಕೂ ಮುನ್ನ ಸಿದ್ದವಾದ ಶಾಲಾ‌ ಶಿಕ್ಷಕರು

ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಗೆ ಶಿಕ್ಷಕರು ಹಾಜರಾಗಿದ್ದು, ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥ ಎಂ.ಬಿ.ನಾತು ಅವರು ಶಿಕ್ಷಕರೊಂದಿಗೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.

ತರಗತಿಯಲ್ಲಿ ಮಾಡಬೇಕಾದ ಮಾರ್ಪಾಡು ಹಾಗೂ ಸಾಮಾಜಿಕ ಅಂತರ ಹಾಗೂ ವಿದ್ಯಾರ್ಥಿಗಳಲ್ಲಿರುವ ಆತಂಕವನ್ನು ದೂರ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸರ್ಕಾರ ಶಾಲೆ ಆರಂಭಿಸುವುದಕ್ಕೆ ಯಾವುದೇ ಸಂದರ್ಭದಲ್ಲಿ ಅನುಮತಿ ನೀಡಿದ್ರೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಶಿಕ್ಷಕರಿಗೆ ಸೂಚನೆ ನೀಡಿದರು.

ABOUT THE AUTHOR

...view details