ಹುಬ್ಬಳ್ಳಿ:ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತಾ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್-19 ರೋಗಿಗಳು ಹಾಗೂ ಕಿಮ್ಸ್ ಲ್ಯಾಬ್ನಲ್ಲಿ ನಡೆಸುತ್ತಿರುವ ಆರ್ಟಿಪಿಸಿಆರ್ (RT-PCR) ಟೆಸ್ಟ್ಗಳ ಬಗ್ಗೆ ಮಾಹಿತಿ ಪಡೆದರು. ಕಿಮ್ಸ್ ಆಸ್ಪತ್ರೆಯಲ್ಲಿ 630 ಬೆಡ್ಗಳಿಗೆ ಆಕ್ಸಿಜನ್ ಸರಬರಾಜು ವ್ಯವಸ್ಥೆ ಕಲ್ಪಿಸಲಾಗಿದೆ. 100 ವೆಂಟಿಲೇಟರ್ ಸೌಲಭ್ಯದ ಐಸಿಯು ವಾರ್ಡ್ ಸಿದ್ಧಪಡಿಸಲಾಗಿದೆ. ಕೊಪ್ಪಳ, ಹಾವೇರಿ, ಸವದತ್ತಿ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಂದ ಕೋವಿಡ್ ರೋಗಿಗಳು ಹುಬ್ಬಳ್ಳಿಯ ಕಿಮ್ಸ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದಾರೆ. ಇವರ ಮಾಹಿತಿಯನ್ನು ಆಯಾ ಜಿಲ್ಲಾ ಕಚೇರಿಗಳಿಗೆ ಕಳುಹಿಸಿ ಕೊಡಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ರೋಗಿಗಗಳ ಮರಣ ಪ್ರಮಾಣ ಶೇ.5 ರಷ್ಟಿದೆ. ಪ್ರತಿದಿನ 2 ಸಾವಿರಕ್ಕೂ ಅಧಿಕ RAT ಟೆಸ್ಟ್ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇತರೆ ವಿಭಾಗಳ ವೈದ್ಯರು ಹಾಗೂ ನರ್ಸ್ಗಳಿಗೆ ಕೋವಿಡ್ ಚಿಕಿತ್ಸೆ ನೀಡುವುದರ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದರು.